ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

0

ಉಜಿರೆ:ಫೆ27. “ವಿದ್ಯಾರ್ಥಿಗಳಲ್ಲಿ ಬರೀ ಜ್ಞಾನ ಸಾಲದು, ಜ್ಞಾನದ ಜೊತೆ ಕೌಶಲ್ಯಗಳ ಅಗತ್ಯತೆ ಇದೆ” ಎಂದು ಎಸ್.ಡಿ.ಎಮ್ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರು ಟಿ.ಎನ್ ಕೇಶವ್ ವಿದ್ಯಾರ್ಥಿಗಳೊಂದಿಗೆ ವಿಷಯ ವಿವರಿಸಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಿ.ವಿ ರಾಮನ್ ಅವರ ಸಂಶೋಧನೆಯಾದ ‘ರಾಮನ್ ಪರಿಣಾಮ’ಕ್ಕೆ ನೋಬೆಲ್ ಪ್ರಶಸ್ತಿ ದೊರೆತ ದಿನವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಿದ ವಿಜ್ಞಾನ ದಿನದ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು.

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಪೋಸ್ಟರ್ ಮೇಕಿಂಗ್, ವಿಜ್ಞಾನ ಮಾದರಿ ತಯಾರಿ, ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.ಶಾಲಾ ಪ್ರಾಂಶುಪಾಲ ಮನಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಜಿತಿನ್ ವಂದಿಸಿ, ಸಿದ್ಧಾಂತ್ ನಿರೂಪಿಸಿದರು.

LEAVE A REPLY

Please enter your comment!
Please enter your name here