







ಧರ್ಮಸ್ಥಳ: ನೇತ್ರಾವತಿ ಸೇತುವೆಯ ಸಮೀಪ ಬೈಕ್ ಹಾಗೂ ಪಿಕಪ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾ. 2ರಂದು ರಾತ್ರಿ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಪಿಕಪ್ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿ ಚಾಲಕರ ನಿಯಂತ್ರಣ ತಪ್ಪಿ ಬೈಕ್ ಸವಾರಣಿಗೆ ಗಂಭೀರ ಗಾಯವಾಗಿದ್ದು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.



ಬೈಕ್ ಸವಾರ ಕನ್ಯಾಡಿ ಕೊರಗಪ್ಪ ಪೂಜಾರಿಯವರ ದ್ವಿತೀಯ ಪುತ್ರ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.









