






ಶಿಬಾಜೆ :ಮಾರ್ಚ್ 3, 2026ರ ಮಂಗಳವಾರ ಚಂದ್ರಗ್ರಹಣ ಸಂಭವಿಸುವ ಹಿನ್ನೆಲೆಯಲ್ಲಿ ಶಿಬಾಜೆಯ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.



ಈ ದಿನ ನಡೆಯಬೇಕಿದ್ದ ಮಧ್ಯಾಹ್ನದ ಪೂಜೆ ಬೆಳಗ್ಗೆ 11.00 ಗಂಟೆಗೆ ನೆರವೇರಿಸಲಾಗುತ್ತದೆ. ಪೂಜೆ ನಂತರ ದೇವಸ್ಥಾನದ ಬಾಗಿಲು ಮುಚ್ಚಲಾಗಲಿದ್ದು, ಭಕ್ತಾದಿಗಳು ಈ ಬಗ್ಗೆ ಗಮನಿಸಿ ಸಹಕರಿಸಬೇಕೆಂದು ವ್ಯವಸ್ಥಾಪನಾ ಸಮಿತಿ ಮನವಿ ಮಾಡಿದೆ.
ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಿನ ಮಧ್ಯಾಹ್ನದ ಭೋಜನ ಪ್ರಸಾದ ಇರುವುದಿಲ್ಲ ಎಂದು ತಿಳಿಸಲಾಗಿದೆ. ರಾತ್ರಿ ಗ್ರಹಣ ಮೋಕ್ಷವಾದ ಬಳಿಕ ದೇವಸ್ಥಾನದ ಬಾಗಿಲು ಮರು ತೆರೆಯಲಾಗುತ್ತದೆ. ಈ ಕ್ರಮವನ್ನು ಕ್ಷೇತ್ರದ ತಂತ್ರಿಗಳ ಸೂಚನೆ ಮೇರೆಗೆ ಕೈಗೊಳ್ಳಲಾಗುತ್ತಿದೆ ಎಂದು ದೇವಸ್ಥಾನದ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶಿಬಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









