







ಉಜಿರೆ:ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅದ್ಧೂರಿಯಾಗಿ ನಡೆಯುತ್ತಿದೆ. ಮಾರ್ಚ್ 3ರಂದು ರಾತ್ರಿ ಉಜಿರೆಗೆ ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಭೇಟಿ ನೀಡಿ,ಭಕ್ತರನ್ನು ಆಶೀರ್ವದಿಸಿದರು.


ಉಜಿರೆಯಲ್ಲಿ ಬ್ರಹ್ಮಕಲಶೋತ್ಸವಕ್ಕೆ ಮಾಡಲಾಗಿರುವ ತಯಾರಿಗಳನ್ನು ನೋಡಿ ಖುಷಿಪಟ್ಟರು. ಮಾ.3 ರಂದು ವಿಜಯಗೋಪುರ ಲೋಕಾರ್ಪಣೆ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಮುಂಭಾಗದಲ್ಲಿ ನೂತನವಾಗಿ ನಿರ್ಮಾಣಗೊಂಡ ವಿಜಯಗೋಪುರವು ಮಾ.4 ರಂದು ಬೆಳಗ್ಗೆ ಉದ್ಘಾಟನೆಗೊಳ್ಳಳಿದೆ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದು ಬೆಳಗ್ಗೆ 9.30ಕ್ಕೆ ನೂತನ ವಿಜಯಗೋಪುರವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಲೋಕಾರ್ಪಣೆಗೊಳಿಸಲಿದ್ದಾರೆ.
ಸುದರ್ಶನ ಸಭಾಭವನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರು ಆಶೀರ್ವಚನ ನೀಡಲಿದ್ದಾರೆ. ವಿಜಯಗೋಪುರ ನಿರ್ಮಾಣ ಸಮಿತಿ ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಅಧ್ಯಕ್ಷತೆ ವಹಿಸಲಿದ್ದು, ಚಿಂತಕ ದಾಮೋದರ ಶರ್ಮ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅಭ್ಯಾಗತರಾಗಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಧರ್ಮ ಸ್ಥಳದ ಡಿ.ಹರ್ಷೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜ, ವಿಧಾನ ಪಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಮೆಸ್ಕಾಂ ಅಧ್ಯಕ್ಷ ಕೆ.ಹರೀಣ್ ಕುಮಾರ್, ಉದ್ಯಮಿ ಶ್ರೀಪತಿ ಭಟ್, ಕಾಂಗ್ರೆಸ್ ಮುಖಂಡ ಎಂ.ಶ್ರೀಣಾಂತ್, ಮಾಜಿ ಶಾಸಕ ಎಚ್.ಎಂ. ರಮೇಶ್ ಗೌಡ, ಪ್ರತಾಪ್ ಆರ್.ಗೌಡ, ಕರವೇ ರಾಮಮೂರ್ತಿ, ವಾಸ್ತು ತಜ್ಞ ರಮೇಶ್ ಕಾರಂತ್ ಬೆದ್ರಡ್ಕ ಭಾಗವಹಿಸಲಿದ್ದಾರೆ.









