






-ಉಜಿರೆ; ಮಾ.04 : ಅಗಸ್ಯ ಇಂಟರ್ನ್ಯಾಷನಲ್ ಫೌಂಡೇಶನ್ ಹಾಗೂ ಬೆಂಗಳೂರಿನ ಸಿನೋಪ್ಪಿಸ್ ಸಂಸ್ಥೆಯ ಆಶ್ರಯದಲ್ಲಿ ಇತ್ತೀಚೆಗೆ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿ ಯನ್ಷಿಪ್ನಲ್ಲಿ ಸಕ್ರೀಯವಾಗಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗು ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಅನ್ವೇಷಣಾ-2026 ಪ್ರಾಜೆಕ್ಟ್ ಚಾಂಪಿ ಯನ್ಷಿಪ್ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ವಿವಿಧ ಎಂಜಿನಿಯರಿಂಗ್ ಕಾಲೇಜು ಗಳಿಂದ ಸುಮಾರು 600ಕ್ಕೂ ಹೆಚ್ಚು ನವೀನ ತಾಂತ್ರಿಕ ಪ್ರಾಜೆಕ್ಟ್ ಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಅವುಗಳಲ್ಲಿ 45 ತಂಡಗಳು ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದುವು ಈ ನಡುವೆ ಉಜಿರೆಯ ಎಸ್.ಡಿ.ಎಂ ಸಂಸ್ಥೆಯ ವಿದ್ಯಾರ್ಥಿಗಳು ತಯಾರಿಸಿದ ಪ್ರಾಜೆಕ್ಟ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿ ಪ್ರಶಸ್ತಿಗೆ ಆಯ್ಕೆಯಾಗಿದ್ದು ವಿಶೇಷವಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿಯೊಂದಿಗೆ 8,000 ನಗದು ಬಹುಮಾನವನ್ನು ನೀಡಿ ಗೌರವಿಸಿದೆ.ಪ್ರಾಜೆಕ್ಟ್ ಚಾಂಪಿ ಯನ್ಷಿಪ್ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಪ್ರಾಜೆಕ್ಟ್ ಗಳನ್ನು ಸಿದ್ದಪಡಿಸಿ ಪ್ರಸ್ತುತಪಡಿಸಬೇಕಿದ್ದುದ್ದರಿಂದ ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಾಹನಾ ಬೋಗಾರ್, ಚಂದನಾ, ಅಖಿಲೇಶ್ ಹಾಗು ಉಜಿರೆಯ ಎಸ್.ಡಿ.ಎಂ ಅನುದಾನಿತ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗಳಾದ ಕಾರ್ತಿಕ್, ರಾಕೇಶ್ ಡಿ.ಆರ್ ಭಾಗವಹಿಸಿದ್ದರು.


ಇವರಿಗೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ. ಪದ್ಮ ಪ್ರಸಾದ ಮಾರ್ಗದರ್ಶನ ನೀಡಿರುತ್ತಾರೆ.ರಾಷ್ಟ್ರ ಮಟ್ಟದ ಪ್ರಾಜೆಕ್ಟ್ ಚಾಂಪಿ ಯನ್ಷಿಪ್ನಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಎಸ್.ಡಿ.ಎಂ ಸಂಸ್ಥೆಯ ಆಡಳಿತ ಮಂಡಳಿ ಸೇರಿದಂತೆ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್, ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪೂರನ್ ವರ್ಮ, ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಿಬ್ಬಂದಿವರ್ಗವರು ಅಭಿನಂದಿಸಿರುತ್ತಾರೆ.
ಈ ಸಾಧನೆ ಉಜಿರೆಯ ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಗರಿಮೆಯನ್ನು ಹೆಚ್ಚಿದ್ದು, ಶೈಕ್ಷಣಿಕ ಶ್ರೇಷ್ಠತೆ ಹಾಗೂ ಪ್ರಾಯೋಗಿಕ ನವೀನತೆಗೆ ಸಂಸ್ಥೆಯ ಬದ್ಧತೆಯನ್ನು ಪ್ರತಿಬಿಂಬಿಸಿದೆ.









