ಬೆಳ್ತಂಗಡಿಯಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸಂಘದ ವತಿಯಿಂದ ಗೆಜ್ಜೆಗಿರಿ ಮೇಳದ ಯಕ್ಷಗಾನ

0

ಬೆಳ್ತಂಗಡಿ: ಬೆಳ್ತಂಗಡಿಯ ಮಾರಿಗುಡಿ ಮೈದಾನದಲ್ಲಿ ಆದಿ ಧೂಮಾವತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಯಕ್ಷಗಾನ ಬಯಲಾಟ ಮಾ. 4 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಕೋಟಿ ಚೆನ್ನಯಎಂಬ ಪ್ರಸಂಗ ಯಕ್ಷಗಾನ ಬಯಲಾಟ ನಡೆಯಿತು.

ಗೆಜ್ಜೆ ಗಿರಿ ಕ್ಷೇತ್ರದ ಗೌರವಾಧ್ಯಕ್ಷ ಪೀತಾಂಬರ ಹೆರಾಜೆ, ಆಡಳಿತ ಸಮಿತಿಯ ಸುಜಿತಾ ವಿ. ಬಂಗೇರ, ನಿತ್ಯಾನಂದ ನಾವರ, ರಾಜಶ್ರೀ ರಮಣ ಮುಂತಾದವರನ್ನು ಅಭಿನಂದಿಸಲಾಯಿತು.

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಅಧ್ಯಕ್ಷತೆ ವಹಿಸಿದ್ದರು, ಕಾರ್ಯದರ್ಶಿ ನಿತೇಶ್ ಹೆಚ್. ಕೋಟ್ಯಾನ್ ಸ್ವಾಗತಿಸಿದರು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಮ್. ಕೆ. ಪ್ರಸಾದ್ ವಂದಿಸಿದರು.ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್,ಸಂಘದ ನಿರ್ದೇಶಕರಾದ ಚಂದ್ರಶೇಖರ್, ರೂಪೇಶ್ ಧರ್ಮಸ್ಥಳ ಸಹಕರಿಸಿದರು.

LEAVE A REPLY

Please enter your comment!
Please enter your name here