







ಬೆಳ್ತಂಗಡಿ : ವಿಧಾನಸಭೆಯಲ್ಲಿ ಇಂದು ಮಂಡಿಸಿರುವ 2026-27ನೇ ಸಾಲಿನ ಬಜೆಟ್ ನಲ್ಲಿ ಅವರು ಎಲ್ಲಾ ಸಮುದಾಯಗಳ ವಿದ್ಯಾರ್ಥಿಗಳಿಗೆ ನಿರಂತರ ಕಲೊಕಾ ಜ್ಞಾನವನ್ನು ವ್ರುದ್ದಿಸಲು ಆಯ್ದ ವಕ್ಪ್ ಆಸ್ತಿಗಳಲ್ಲಿ ಕಲಿಕಾ ಕೇಂದ್ರ ಹಾಗು ಸೇವಾ ಕೇಂದ್ರ ಸ್ಥಾಪಿಸುವುದು. ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡಲು ಎರಡು ಹೊಸ ಪೋಲಿಸ್ ಠಾಣೆಗಳ ಮಂಜೂರು, ಹಲವು ವರ್ಷಗಳ ಜನರ ಬಹುಮುಖ್ಯ ಬೇಡಿಕೆಯಾಗಿದ್ದ ಸರ್ಕಾರಿ ಮೆಡಿಕಲ್ ಕಾಲೇಜ್ ಗೆ ಪೂರಕವಾಗಿ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಮೀಸಲಿಡಲಾಗಿದೆ. ಪ.ಜಾತಿ/ಪ.ಪಂ ಉದ್ಯೋಗಸ್ಥ ಮಹಿಳೆಯರಿಗಾಗಿ ವಸತಿ ನಿಲಯ ಸ್ಥಾಪನೆ ಅಭಿವೃದ್ಧಿ ಹೊಸ ಮೈಲಿಗಲ್ಲು.


ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ, ಸಾಮಾಜಿಕ ದೌರ್ಜನ್ಯಗಳನ್ನು ತಡೆಗಟ್ಟಲು ರೋಹಿತ್ ವೇಮುಲ ಕಾಯಿದೆ ಜಾರಿಗೊಳಿಸಿರುವ ರಾಜ್ಯ ಸರ್ಕಾರದ ಕ್ರಮ ಐತಿಹಾಸಿಕವಾದುದು. ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್, 800 ನೂತನ ಕೆ.ಪಿ.ಎಸ್ ಶಾಲೆಗಳ ಘೋಷಣೆ ಮಾಡಿರುವುದು ರಾಜ್ಯದಲ್ಲಿ ಶೈಕ್ಷಣಿಕ ಕ್ರಾಂತಿಯ ಭಾಗವಾಗಿದೆ. ಸಮಗ್ರ ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆ ಜಾರಿಗೆ ತರುವ ಮೂಲಕ ಕರಾವಳಿಯ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಲಾಗಿದೆ. ಅಡಿಕೆ ಎಲೆಚುಕ್ಕಿ ರೋಗ, ಬಿಳಿಕೀಟಗಳ ನಿಯಂತ್ರಣಕ್ಕಾಗಿ ಕೃಷಿ ವಿಶ್ವವಿದ್ಯಾಲಯಗಳ ಸಹಯೋಗದೊಂದಿಗೆ ಕ್ರಮ ಕೈಗೊಳ್ಳುವ ಮೂಲಕ ಅಡಿಕೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲಾಗಿದೆ.
ಮಾನವ- ವನ್ಯಜೀವಿ ಸಂಘರ್ಷಕ್ಕಾಗಿ ಮಾನವ- ವನ್ಯಜೀವಿ ಸಂರಕ್ಷಣಾ ಕಾರ್ಯತಂತ್ರ ಯೋಜನೆಗಾಗಿ 5 ವರ್ಷಗಳಲ್ಲಿ 150 ಕೋಟಿ ಮೀಸಲು, , ಅರಣ್ಯ/ ಅರಣ್ಯದಂಚಿನಲ್ಲಿ ವಾಸಿಸುವ ವಸತಿರಹಿತ ಕುಟುಂಬಗಳಿಗೆ 4.50 ಲಕ್ಷ ವೆಚ್ಚದ ಮನೆ ನಿರ್ಮಾಣ ಸೇರಿದಂತೆ ಕಾರ್ಮಿಕರ ಮಕ್ಕಳಿಗೆ ಶ್ರಮಿಕ ವಸತಿಶಾಲೆ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ಸಮಾಜದ ಕಟ್ಟಕಡೆಯ ಜನರಿಗೆ ಸಾಮಾಜಿಕ ನ್ಯಾಯವನ್ನು ಒದಗಿಸುವ ಮೂಲಕ ಐತಿಹಾಸಿಕ ಬಜೆಟ್ ಮಂಡಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಅಝರ್ ನಾವೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









