







ಉಜಿರೆ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಉಜಿರೆ ಬ್ರಹ್ಮಕಲಶೋತ್ಸವದ ಅಂಗವಾಗಿ 7 ನೇ ದಿನ ಮಾ. 9 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಮತ್ತು ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಿದರು.

ಸಭಾ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ನವಶಕ್ತಿ ಬರೋಡ ವಹಿಸಿದ್ದರು.ಮೂಡ ಬಿದ್ರೆ ಎಕ್ಷಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್, ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟ್ನಾಯ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರು, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ ಸಿಂಹ ನಾಯಕ್, ಉಜಿರೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಸೋನಿಯಾ ವರ್ಮ ನಿನಾದ ಉಜಿರೆ,



ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ. ಪಿ. ಶ್ರೀನಾಥ್, ಕನ್ಯಾಡಿ ಸೇವಾ ಭಾರತಿ ಅಧ್ಯಕ್ಷೆ ಸ್ವರ್ಣ ಗೌರಿ, ಬೆಳ್ತಂಗಡಿ ಕೂಟ ಮಹಾಜಗತ್ತು ಅಧ್ಯಕ್ಷ ವಾಸುದೇವ ಸೋಮಯಾಜಿ, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಮುರಳಿ ಬಲಿಪ, ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣ ಸಂಘದ ಅಧ್ಯಕ್ಷ ತ್ರಿವಿಕ್ರಮ ಹೆಬ್ಬಾರ್, ಉಜಿರೆ ವಲಯ ಹವ್ಯಕ ಅಧ್ಯಕ್ಷ ವಿದ್ಯಾಕುಮಾರ್ ಕಾಂಚೋಡು, ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪ್ರಕಾಶ್ ಪ್ರಭು ಉಪಸ್ಥಿತರಿದ್ದರು.ಬ್ರಹ್ಮ ಕಲಶೋತ್ಸವ ಸಮಿತಿಯ ಗೌರವ ಸಲಹೆಗಾರ ಅನಂತ ಭಟ್ ಮಚ್ಚಿಮಲೆ ಸ್ವಾಗತಿಸಿದರು.

ವಿಶ್ವಹಿಂದೂ ಪರಿಷತ್ ಮಾತೃ ಮಂಡಳಿ ಸದಸ್ಯರು ಪ್ರಾರ್ಥನೆ ಮಾಡಿದರು. ಶಿಕ್ಷಕ ರಾಮಕೃಷ್ಣ ಭಟ್ ಬಳಂಜ ಕಾರ್ಯಕ್ರಮ ನಿರೂಪಿಸಿ ಬ್ರಹ್ಮಕಲಶೋತ್ಸವ ಸಮಿತಿಯ ಜತೆ ಕಾರ್ಯದರ್ಶಿ ವಿದ್ಯಾಕುಮಾರ್ ಕಾಂಚೋಡು ವಂದಿಸಿದರು.










