ಶಿಶಿಲ ಭಾಗದಲ್ಲಿ ಹಾವು ಕಡಿತ ಪ್ರಕರಣಗಳು ಹೆಚ್ಚಳ – ಉಪ ಆರೋಗ್ಯ ಕೇಂದ್ರಗಳಲ್ಲಿ ತಕ್ಷಣದ ಚಿಕಿತ್ಸೆಗೆ ಆಗ್ರಹ

0

ಬೆಳ್ತಂಗಡಿ ತಾಲೂಕಿನ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ಶಿಶಿಲ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಹಾವು ಕಡಿತದ ಘಟನೆಗಳು ಹೆಚ್ಚಾಗಿ ಕಂಡುಬರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಶಿಶಿಲ ಗ್ರಾಮದಲ್ಲಿಯೇ ಒಂದು ತಿಂಗಳ ಅವಧಿಯಲ್ಲಿ ಮೂವರಿಗೆ ಹಾವು ಕಡಿದ ಘಟನೆ ನಡೆದಿದ್ದು, ಅವರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇನ್ನೊಬ್ಬರು ಇನ್ನೂ ಸಂಪೂರ್ಣವಾಗಿ ಚೇತರಿಸಿಕೊಳ್ಳದೆ ಚಿಕಿತ್ಸೆಯಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.ಈ ರೀತಿಯ ದುರ್ಘಟನೆಗಳಿಗೆ ಸೂಕ್ತ ಸಮಯದಲ್ಲಿ ಸರಿಯಾದ ಚಿಕಿತ್ಸೆ ದೊರೆಯದಿರುವುದೇ ಪ್ರಮುಖ ಕಾರಣವಾಗುತ್ತಿದೆ ಎಂಬ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗುತ್ತಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಸಂದರ್ಭಗಳಲ್ಲಿ ಸಮೀಪದಲ್ಲೇ ಅಗತ್ಯ ಚಿಕಿತ್ಸೆ ಲಭ್ಯವಿಲ್ಲದಿರುವುದು ಜನರಲ್ಲಿ ಆತಂಕ ಮೂಡಿಸಿದೆ. ಆದ್ದರಿಂದ ಜಿಲ್ಲಾಸ್ಥರದ ಆರೋಗ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಪ್ರತಿ ಗ್ರಾಮದ ಉಪ ಆರೋಗ್ಯ ಕೇಂದ್ರಗಳಲ್ಲಿ ರಕ್ತ ಪರೀಕ್ಷೆ ನಡೆಸುವ ವ್ಯವಸ್ಥೆ ಹಾಗೂ ವಿಷಕಾರಿ ಹಾವುಗಳ ಕಡಿತಕ್ಕೆ ಒಳಗಾದವರಿಗೆ ನೀಡಬೇಕಾದ ಪ್ರಾಥಮಿಕ ಚಿಕಿತ್ಸೆ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಈ ಕುರಿತು ಕರುಣಾಕರ ಶಿಶಿಲ ಅವರು ಆರೋಗ್ಯ ಇಲಾಖೆಗೆ ಮನವಿ ಸಲ್ಲಿಸಿ, ಗ್ರಾಮೀಣ ಪ್ರದೇಶಗಳಲ್ಲಿ ಹಾವು ಕಡಿತದಂತಹ ತುರ್ತು ಪರಿಸ್ಥಿತಿಗಳಿಗೆ ತಕ್ಷಣ ಸ್ಪಂದಿಸುವ ವ್ಯವಸ್ಥೆ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here