ಮಾ.11: ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ

0

ಮಹಿಳಾ ದಿನಾಚರಣೆ ಮತ್ತು ಗ್ಯಾರಂಟಿ ಯೋಜನೆಗಳ ಅರಿವು ಕಾರ್ಯಕ್ರಮ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಟಾನ ಸಮಿತಿ ಬೆಳ್ತಂಗಡಿ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಳ್ತಂಗಡಿ, ಗ್ರಾಮ ಪಂಚಾಯತ್ ಮಾಲಾಡಿ, ಅಮೃತ ಸಂಜೀವಿನಿ ಒಕ್ಕೂಟ ಮಾಲಾಡಿ ಇವುಗಳ ಜಂಟಿ ಸಹಯೋಗದೊಂದಿಗೆ ಮಾ.11ರಂದು ಬುಧವಾರ ಪೂರ್ವಾಹ್ನ 10.30ಕ್ಕೆ ಮಾಲಾಡಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ನಡೆಯಲಿದ್ದು, ಫಲಾನುಭವಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಾಲೂಕು ಅನುಷ್ಟಾನ ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅವರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿರುತ್ತಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಇವರು ನೆರವೇರಿಸಲಿದ್ದು, ದ.ಕ. ಜಿಲ್ಲಾ ಗ್ಯಾರಂಟಿ ಅನುಷ್ಟಾನ ಸಮಿತಿಯ ಉಪಾಧ್ಯಕ್ಷ ಶೇಖರ್ ಕುಕ್ಕೇಡಿ, ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯ ಆಗ್ನೇಸ್ ಇವರು ಉಪಸ್ಥಿತರಿದ್ದು, ಸಂಜೀವಿನಿ ಯೋಜನೆಯ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ಸೂಕ್ತ ಮಾಹಿತಿಯನ್ನು ನೀಡಲಿದ್ದಾರೆಂದು ಅವರು ತಿಳಿಸಿದ್ದಾರೆ.

ಗೃಹಲಕ್ಷ್ಮೀ ಯೋಜನೆಗೆ ಈವರೆಗೆ ಅರ್ಜಿ ಸಲ್ಲಿಸದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿದ್ದು, ಅರ್ಹ ಫಲಾನುಭವಿಗಳು ಸಭೆಗೆ ಬರುವಾಗ ಕಡ್ಡಾಯವಾಗಿ ಆಧಾರ್ ಚೀಟಿ ಮತ್ತು ಪಡಿತರ ಚೀಟಿಯನ್ನು ತರುವಂತೆ ವಿನಂತಿಸಿರುತ್ತಾರೆ.

LEAVE A REPLY

Please enter your comment!
Please enter your name here