ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳ ಸಮಾರೋಪ ಕಾರ್ಯಕ್ರಮ

0

ಉಜಿರೆ : ಮಾ10. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವಿದ್ಯಾರ್ಥಿಗಳ ಇಂಗ್ಲಿಷ್ ಭಾಷಾ ಸಂವಹನ ವೃದ್ಧಿಯ ಬೆಳವಣಿಗೆಗಾಗಿ ಆಯೋಜಿಸಲಾಗಿದ್ದ “ಅಕೊಲೆಡ್ಸ್” ತರಗತಿಗಳ ಸಮಾರೋಪ ಕಾರ್ಯಕ್ರಮ ನಡೆಯಿತು.

2025-26ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳಿಗೆ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯು ಅಕೊಲೆಡ್ಸ್ ತರಗತಿಗಳನ್ನು ನಡೆಸಿದ್ದು, ಆ ತರಗತಿಗಳಲ್ಲಿ ಉತ್ತಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಯಿತು.

ವೇದಿಕೆಯಲ್ಲಿ ಮಂಗಳೂರಿನ ಅಕೊಲೆಡ್ಸ್ ಅಕಾಡೆಮಿಯ ಅಧ್ಯಕ್ಷ ಕೃಷ್ಣಪ್ರಸಾದ್ ಅಡಪ್ಪ, ಕಾರ್ಯಕ್ರಮದ ಸಂಯೋಜಕ ಶಿಕ್ಷಕಿ ನೀತು ಪ್ರಸಾದ್, ಶಿಕ್ಷಕಿ ಮಧುರ ಹಾಗೂ ತರಗತಿ ನಡೆಸಿದ ಸಂಪನ್ಮೂಲ ವ್ಯಕ್ತಿಗಳಾದ ವಿನೀತ, ಅನುಷಾ, ಪ್ರಗ್ನ್ಯ ಹಾಗೂ ಸಂಜನಾ ಉಪಸ್ಥಿತರಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶೈಕ್ಷಣಿಕ ಸಂಯೋಜಕಿ ಸುಮಾ ಶ್ರೀನಾಥ್ ವಹಿಸಿದ್ದರು.

LEAVE A REPLY

Please enter your comment!
Please enter your name here