







ಉಜಿರೆ : ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಉಜಿರೆ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ. 10 ರಂದು ನಡೆದ ಧಾರ್ಮಿಕ ಸಭೆಯಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ ಭಾಗವಹಿಸಿ ಆಶೀರ್ವಚನ ನೀಡಿದರು.
ಸಭಾ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ, ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ವಹಿಸಿದ್ದರು. ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಶರತ್ ಕೃಷ್ಣ ಪಡುವೆಟ್ನಾಯ, ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಶಶಿಧರ ಶೆಟ್ಟಿ ಬರೋಡ, ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದ ಅಧ್ಯಕ್ಷ ವಿಷ್ಣು ಮರಾಟೆ, ವಿಶ್ವಹಿಂದೂ ಪರಿಷತ್ ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಬೆಳ್ತಂಗಡಿ ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ, ಗುರುವಾಯನಕೆರೆ ಎಕ್ಷೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ದ. ಕ. ಜಿಲ್ಲಾ ತುಳು ಶಿವಳ್ಳಿ ಸಭಾ ಅಧ್ಯಕ್ಷ ಡಾ. ದಯಾಕರ್, ಬೆಳ್ತಂಗಡಿ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ. ಎನ್. ಜನಾರ್ದನ, ಉಜಿರೆ ಎಸ್ ಡಿ ಎಂ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಜನಾರ್ದನ, ಪ್ರವೀಣ್ ಕುಮಾರ್ ಇಂದ್ರ ಸತ್ಯಧಾಮ ಉಜಿರೆ, ಉಜಿರೆ ಪ್ರಭಾತ್ ಪ್ರೊವಿಷನಲ್ ಸ್ಟೋರ್ ಮಾಲಾಕ ಜಿ. ಪ್ರಭಾತ್ ಭಟ್, ಕನ್ಯಾಡಿ ಶ್ರೀ ಅಯ್ಯಪ್ಪ ಕ್ಷೇತ್ರದ ಅಧ್ಯಕ್ಷ ಹರೀಶ್ ರಾವ್, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಭಾ ಅಧ್ಯಕ್ಷ ವಿಷ್ಣು ಭಟ್, ಪುತ್ತೂರು ಜಿ. ಎಲ್. ಆಚಾರ್ಯ ಸಮೂಹ ಸಂಸ್ಥೆಗಳ ಬಲರಾಮ ಆಚಾರ್ಯ, ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನಾದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ತುಕಾರಾಮ ಬಿ. ಉಪಸ್ಥಿತರಿದ್ದರು.


ಸಭೆಯಲ್ಲಿ ಬ್ರಹ್ಮರಕೂಟ್ಲು ಬಿ. ಎಸ್. ಬ್ಯಾಂಡ್ ಬಿ. ಭೋಜ ಮತ್ತು ತಂಡದವರನ್ನು ಸನ್ಮಾನಿಸಲಾಯಿತು.”ಉಜಿರೆದ ಉಲ್ಲಾಯೇ” ಧ್ವನಿ ಸುರುಳಿಯನ್ನು ಸ್ವಾಮೀಜಿ ಬಿಡುಗಡೆ ಗೊಳಿಸಿದರು.
ರಾಜಗೋಪುರ ನಿರ್ಮಾಣ ಸಮಿತಿಯ ಸಹ ಕೋಶಾಧಿಕಾರಿ ಸಂಜೀವ ಶೆಟ್ಟಿ ಸ್ವಾಗತಿಸಿದರು. ಹರೇಕೃಷ್ಣ ಭಜನಾ ಮಂಡಳಿ ಸದಸ್ಯರು ಪ್ರಾರ್ಥನೆ ಮಾಡಿದರು. ಉಜಿರೆ ಎಸ್ ಡಿ ಎಂ ಐ.ಟಿ. ಕಾಲೇಜು ಉಪನ್ಯಾಸಕ ರವೀಶ್ ಪಡುಮಲೆ ಕಾರ್ಯಕ್ರಮ ನಿರೂಪಿಸಿ ಬ್ರಹ್ಮಕಲಶೋತ್ಸವ ಸಮಿತಿಯ ಕೋಶಾಧಿಕಾರಿ ಶರತ್ ಕುಮಾರ್ ಟಿ. ಕೆ. ವಂದಿಸಿದರು.









