ಶಿಶಿಲ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವ

0

ಶಿಶಿಲ: ಕಾರ್ಕಳ ಶ್ರೀ ಜೈನಮಠದ ಸ್ವಸ್ತಿಶ್ರೀ ಧ್ಯಾನಯೋಗಿ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹೇಮಾವತಿ ವೀ. ಹೆಗ್ಗಡೆಯವರ ಪ್ರೇರಣೆ, ಮಾರ್ಗದರ್ಶನದೊಂದಿಗೆ ಹಾಗೂ ಊರ ಪರಊರ ಸಹೃದಯಿ ಧರ್ಮಾಭಿಮಾನಿ ಸದ್ದರ್ಮ ಬಂಧುಗಳ, ಶಿಶುಗಲಿ ರಾಣಿ ಕಾಳಲಾ ದೇವಿ ಜೈನ ಮಹಿಳಾ ಸಮಾಜದ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ವಾರ್ಷಿಕ ಮಹೋತ್ಸವವು ಬಹಳ ವಿಜೃಂಭಣೆಯಿಂದ ನಡೆಯಿತು.

ವಿಮಾನಶುದ್ದಿ, 24 ಕಲಶ ಅಭಿಷೇಕ, ಪಂಚಾಮೃತ ಅಭಿಷೇಕ, ಶ್ರೀ ಸಮ್ಮೇದಗಿರಿ ಸಿದ್ದ ಕ್ಷೇತ್ರಾ ಆರಾಧನೆ, ಮಹಾಮಾತೆ ಪದ್ಮಾವತಿ ದೇವಿಗೆ ಶೋಡಶೋಪಚಾರ, ಮುಂತಾದ ಧಾರ್ಮಿಕ ಪೂಜಾ ಕಾರ್ಯಕ್ರಮ, ಉತ್ಸವವು ನಡೆಯಿತು.ಈ ಸಂಧರ್ಭದಲ್ಲಿ ಸಾಧನೆ ಗೈದ ಸಾಧಕರಿಗೆ, ಅತಿ ಹೆಚ್ಚಿನ ಅಂಕಗಳನ್ನು ಪಡೆದ ಸಂಘದ ಸದಸ್ಯರ ಮಕ್ಕಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಅಪಾರ ಸಂಖ್ಯೆಯಲ್ಲಿ ಬಾಗವಹಿಸಿ ಬಂಧುಗಳು ಕಾರ್ಯಕ್ರಮಕ್ಕೆ ಸಹಕಾರ ನೀಡಿದರು. ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಸದಸ್ಯರು ಸಹಕರಿಸಿದರು.

LEAVE A REPLY

Please enter your comment!
Please enter your name here