






ಬೆಳ್ತಂಗಡಿ : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ (ರಿ.)ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಘಟಕ, ಪುತ್ತೂರು ಮತ್ತು ಕಡಬ, ತಾಲೂಕು ಘಟಕ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಶೈಕ್ಷಣಿಕ ಸಮಾವೇಶ ಮತ್ತು “ಪದಗ್ರಹಣ ಸಮಾರಂಭವು ಮಾರ್ಚ್ 15ರಂದು ಪುತ್ತೂರಿನ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಲಿದ್ದು,ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.


ಬೆಳ್ತಂಗಡಿ ತಾಲೂಕಿನಲ್ಲಿ ಬೋಧಕೇತರ ವಿಭಾಗದಲ್ಲಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ಜಿಲ್ಲಾ ಮಟ್ಟದ ಸೇವಾ ಭೂಷಣ ಪ್ರಶಸ್ತಿಗೆ ಆಯ್ಕೆಯಾದ ಸರಕಾರಿ ಪ್ರೌಢಶಾಲೆ ಬೆಳ್ತಂಗಡಿಯ ಅನುಚರರಾದ ವಾರಿಜಾ ಬಿ. ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.









