






ಅರಸಿನಮಕ್ಕಿ : ಶಾಲಾ ಅಭಿವೃದ್ಧಿ ಕಾರ್ಯಗಳಿಗೆ ದೇಣಿಗೆ ನೀಡಿ ಸಹಕರಿಸಿರುವ ಶಾಲೆಯ ಹಿರಿಯ ವಿದ್ಯಾರ್ಥಿ ಡಾ. ಹೃಷಿಕೇಶ್ ದಾಮ್ಲೆ (Founder, MD & CEO, Atrimed Pharmaceuticals Pvt. Ltd., ಬೆಂಗಳೂರು) ಅವರು ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಕ ಮಾರ್ಗದರ್ಶನ ನೀಡಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಕೃತಿಯೊಂದಿಗೆ ಹೊಂದಿಕೊಂಡ ಕಲಿಕೆಯ ಮಹತ್ವ ಹಾಗೂ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಮುಂಚಿತವಾಗಿ ಹೇಗೆ ಸಿದ್ಧರಾಗಬೇಕು ಎಂಬುದನ್ನು ತಮ್ಮ ಸ್ವಂತ ಅನುಭವಗಳ ಮೂಲಕ ವಿವರಿಸಿದರು. ಅವರ ಮಾತುಗಳು ವಿದ್ಯಾರ್ಥಿಗಳಿಗೆ ಪ್ರೇರಣೆ ಹಾಗೂ ಮಾರ್ಗದರ್ಶನ ನೀಡುವಂತಾಗಿತ್ತು.ಶಾಲೆಯ ಹಳೆಯ ವಿದ್ಯಾರ್ಥಿಯಾಗಿ ತಮ್ಮ ಅಮೂಲ್ಯ ಸಮಯವನ್ನು ಶಾಲೆಯಲ್ಲಿ ಕಳೆದಿದ್ದು ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಸಂತೋಷ ತಂದಿತು.
ಶಾಲಾ ಅಭಿವೃದ್ಧಿಗೆ ನೀಡುತ್ತಿರುವ ಸಹಕಾರ ಹಾಗೂ ಅಮೂಲ್ಯ ಸಲಹೆಗಳಿಗೆ ಶಾಲಾ ಪರವಾಗಿ ಕೃತಜ್ಞತೆ ಸಲ್ಲಿಸಲಾಯಿತು.ಸರಕಾರಿ ಪ್ರೌಢಶಾಲೆ ಅರಸಿನಮಕ್ಕಿ ವತಿಯಿಂದ ಡಾ. ಹೃಷಿಕೇಶ್ ದಾಮ್ಲೆ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಲಾಯಿತು.









