






ಬೆಳ್ತಂಗಡಿ: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ ಹಾಗೂ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಾ.14 ರಿಂದ ಮಾ.19 ರವರೆಗೆ ನಡೆಯಲಿದೆ.ಮಾ.14 ರಂದು ಮೀನ ಸಂಕ್ರಮಣ ದಿನ ಮಧ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ ರಾತ್ರಿ ಗಂಟೆ 9-30ಕ್ಕೆ ಪಡ್ಡ್ಯಾರಬೆಟ್ಟಗುತ್ತಿನಲ್ಲಿ ಉಪಹಾರ ರಾತ್ರಿ ಗಂಟೆ 10-00ಗಂಟೆಗೆ ಪಡ್ಡ್ಯಾರಬೆಟ್ಟಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿಯುವುದು.


ಮಾ.15 ರಂದು ಭೂತಬಲಿ ಉತ್ಸವ ನಡೆಯಲಿದೆ.ಮಾ.16 ರಂದು ಅಂಬೋಡಿ, ಬಲಿ, ಉತ್ಸವ ಹೂವಿನ ಪೂಜೆ, ರಥಾರೋಹಣ ನಡೆಯಲಿದೆಮಾ.17 ರಂದು ವರ್ಷಾವಧಿ ಜಾತ್ರೋತ್ಸವ ಮಧ್ಯಾಹ್ನ 12 ರಿಂದ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ 1.30ರಿಂದ 7.30ರ ತನಕ ಮಹಾ ಅನ್ನಸಂತರ್ಪಣೆ ರಾತ್ರಿ ಕೊಡಮಣಿತ್ತಾಯ ದೈವದ ನೇಮೋತ್ಸವ ನಡೆಯಲಿದೆ.ಮಾ.18 ರಂದು ಧ್ವಜ ಅವರೋಹಣ, ಸಂಪ್ರೋಕ್ಷಣೆ ಪಡ್ಡ್ಯಾರಬೆಟ್ಟ ಗುತ್ತಿಗೆ ಬಂಡಾರ ಹಿಂದಿರುಗುವುದು.ಮಾ.19 ರಂದು ರಾತ್ರಿ ಗಂಟೆ 7.30 ರಿಂದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಲಾಪಗಳು, ಹೂವಿನ ಪೂಜೆ ಕೊಡಮಣಿತ್ತಾಯ ದೈವದ ಕುರುಸಂಬಿಲ ನೇಮ, ತುಲಾಭಾರ ಸೇವೆ ನಡೆಯಲಿದೆ ಎಂದು ಪಡ್ಡ್ಯಾರಬೆಟ್ಟಗುತ್ತಿನ ಅನುವಂಶೀಯ ಆಡಳಿತದಾರ ಎ.ಜೀವಂಧರ ಕುಮಾರ್ ತಿಳಿಸಿದ್ದಾರೆ.









