







ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ (ರಿ), ಗುರುವಾಯನಕೆರೆ ಸಂಘದ ವತಿಯಿಂದ ಏಪ್ರಿಲ್ 26 ರಂದು ನಡೆಯಲಿರುವ ಶ್ರೀ ಸತ್ಯನಾರಾಯಣ ಪೂಜೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮಾ.18 ರಂದು ಭಕ್ತಿಭಾವಪೂರ್ಣ ವಾತಾವರಣದಲ್ಲಿ ಬಿಡುಗಡೆಗೊಳಿಸಲಾಯಿತು.


ಆಮಂತ್ರಣ ಪತ್ರಿಕೆಯನ್ನು ಡಾ. ರವಿ ಎನ್ ಅವರು ಬಿಡುಗಡೆ ಮಾಡಲಾಯಿತು. ಕ್ಷೇತ್ರದ ಆಡಳಿತ ಮೊಕ್ತೇಸರರಾದ ವಿಶ್ವನಾಥ್ ಎನ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಮೂಲ್ಯ ಅನಿಲಡೆ, ತಾಲೂಕು ಸಂಘದ ಅಧ್ಯಕ್ಷ ಸೋಮಯ ಹನೈನಡೆ, ಶಾಂಭವಿ ಹನೈನಡೆ, ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ ಎನ್, ಕೋಶಾಧಿಕಾರಿ ದಿನೇಶ್ ಮಾಲಾಡಿ, ಜೊತೆ ಕಾರ್ಯದರ್ಶಿ ಸಂದೇಶ್ ಕುಮಾರ್ ಸೇರಿದಂತೆ ತಾರನಾಥ ಹನೈನಡೆ, ದಿನೇಶ್ ಕೊಂಡೆಮಾರು, ಉಜ್ವಲ್, ಆನಂದ ಮೂಲ್ಯ, ಕೃಷ್ಣಪ್ಪ ಮೂಲ್ಯ ಬರ್ನ ಹಾಗೂ ಇನ್ನಿತರ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಸಂಘದ ವತಿಯಿಂದ ಆಯೋಜಿಸಲಾಗುತ್ತಿರುವ ಈ ಪೂಜೆ ಕಾರ್ಯಕ್ರಮಕ್ಕೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.









