ಕಾವು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಹಾದ್ವಾರ ಉದ್ಘಾಟನೆ ಹಾಗೂ ವಾರ್ಷಿಕ ಮಹೋತ್ಸವ

0

ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಕಾವು ಪ್ರದೇಶದಲ್ಲಿರುವ ತ್ರಿಗುಣಾತ್ಮಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 23, 2026ರಂದು ಮಹಾದ್ವಾರದ ಉದ್ಘಾಟನೆ ಹಾಗೂ ವಾರ್ಷಿಕ ಪ್ರತಿಷ್ಠಾ ಮಹೋತ್ಸವ ಭಕ್ತಿಭಾವದಿಂದ ನಡೆಯಲಿದೆ.

ಶ್ರೀ ಪರಾಭವ ನಾಮ ಸಂವತ್ಸರದ ಚೈತ್ರ ಶುಕ್ಲ ಪಂಚಮಿ ದಿನ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮವು ಬ್ರಹ್ಮಶ್ರೀ ಎಡಮನೆ ಕೆ.ಯು. ಪದ್ಮನಾಭ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ವೈದಿಕ ವಿಧಿ-ವಿಧಾನಗಳೊಂದಿಗೆ ಜರುಗಲಿದೆ.

ತ್ರಿಕಾಲ ಪೂಜೆ ಸೇರಿದಂತೆ ಹಲವು ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಅಂದು ಬೆಳಿಗ್ಗೆ 10.30ಕ್ಕೆ ಮಹಾದ್ವಾರದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಧಾರ್ಮಿಕ ಪರಿಷತ್ತು ಸದಸ್ಯೆ ಶ್ರೀಮತಿ ಮಲ್ಲಿಕಾ ಪಕಳ, ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕದ ಅಧ್ಯಕ್ಷರಾದ ಕೃಷ್ಣ ಭಟ್ (ಹಿತ್ತಿಲು), ಕೃಷಿಪತ್ತಿನ ಸಹಕಾರಿ ಸಂಘ ಹತ್ಯಡ್ಕದ ಅಧ್ಯಕ್ಷರಾದ ರಾಘವೇಂದ್ರ ನಾಯಕ್ (ಬರ್ಗುಳ), ಆಸರೆ ಶಬರಾಡಿಯ ಮಾಳವಿಕಾ ಶ್ರೀನಿವಾಸ, ತ್ರಿದು.ದೆ. ಆಡಳಿತ ಟ್ರಸ್ಟ್ ಕಾವು ಅಧ್ಯಕ್ಷರಾದ ಕುಶಾಲಪ್ಪ ಗೌಡ (ಪೂವಾಜೆ) ಹಾಗೂ ನೈಮಿಷ ವೆಂಚರ್ಸ್ ಸೌತಡ್ಕದ ಬಾಲಕೃಷ್ಣ ಭಾಗವಹಿಸಲಿದ್ದಾರೆ.

ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಮಹಾಪ್ರಸಾದ ಸ್ವೀಕರಿಸಿ ದೇವಿಯ ಅನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಟ್ರಸ್ಟ್ ಮನವಿ ಮಾಡಿದೆ.

LEAVE A REPLY

Please enter your comment!
Please enter your name here