






ಮಡಂತ್ಯಾರು: ಕ್ಯಾನ್ಸರ್ ರೋಗದ ಕುರಿತು ಸಾರ್ವಜನಿಕರಿಗೆ ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ ನವದೆಹಲಿ, ಸಹಾಯ ಹಸ್ತ ಟ್ರಸ್ಟ್ (ರಿ) ಮಡಂತ್ಯಾರು, ಎನ್.ಜಿ. ವಲ್ಡ್ ಚಾರಿಟೇಬಲ್ ಟ್ರಸ್ಟ್ (ರಿ), ಸ್ನೇಹಜ್ಯೋತಿ ಮಹಿಳಾ ತಾಲೂಕು ಒಕ್ಕೂಟ(ರಿ ) ಬೆಳ್ತಂಗಡಿ, ಸ್ನೇಹಕಿರಣ್ ಮಹಿಳಾ ಜಿಲ್ಲಾ ಒಕ್ಕೂಟ, ಗ್ರಾಮ ಪಂಚಾಯತ್ ಮಡಂತ್ಯಾರು ಹಾಗೂ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಆಳ್ವಾಸ್ ಕಾಲೇಜು ಮೂಡುಬಿದರೆ ಇವುಗಳ ಸಹಯೋಗದೊಂದಿಗೆ ಕ್ಯಾನ್ಸರ್ ಜನಜಾಗೃತಿ ಅಭಿಯಾನ ಹಾಗೂ ಕ್ಯಾನ್ಸರ್ ರೋಗಿಗಳಿಗಾಗಿ ಧನ ಸಹಾಯ ಸಂಗ್ರಹಣಾ ಅಭಿಯಾನವು ಮಾರ್ಚ್ 20 ರಂದು ಮಡಂತ್ಯಾರು ಪೇಟೆಯಲ್ಲಿ ಆಯೋಜಿಸಲಾಯಿತು.

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಚರ್ಚಿನ ಧರ್ಮ ಗುರುಗಳಾದ ಫಾ. ಸ್ಟ್ಯಾನಿ ಗೋವಿಯಸ್ ಕ್ಯಾನ್ಸರ್ ರೋಗದ ಬಗ್ಗೆ ತಯಾರಿಸಿದ ಕರಪತ್ರವನ್ನು ಅನಾವರಣ ಮಾಡುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಮಡಂತ್ಯಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ರೂಪ ನವೀನ್ ಹಾಗೂ ಶುಭಹಾರೈಸಿದರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ನಿರ್ದೇಶಕ ಫಾ. ಬಿನೋಯಿ ಎ. ಜೆ. ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯ ಮೂಲಕ ನಡೆಸಲ್ಪಡುವ ಕ್ಯಾನ್ಸರ್ ರೋಗದ ವಿರುದ್ಧದ ಅಭಿಯಾನದ ಕುರಿತು ಸಮಗ್ರವಾಗಿ ವಿವರಿಸಿದರು. ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾ ಅಧಿಕಾರಿ ಬೇಶ್ ಕುಮಾರಿ ಅವರು ಕ್ಯಾನ್ಸರ್ ರೋಗದ ಬಗ್ಗೆ ಮಾಹಿತಿ ನೀಡಿದರು.

ಮಾನಿನಿ ರಾಜ್ಯ ಒಕ್ಕೂಟದ ಅಧ್ಯಕ್ಷೆ ಮಂಜುಳಾ ಜಾನ್, ಸಹಾಯ ಹಸ್ತ ಟ್ರಸ್ಟ್ (ರಿ)ಮಡಂತ್ಯಾರು ಇದರ ಅಧ್ಯಕ್ಷ ಸುನಿಲ್ ವಿಜಯ್ ಮೊರಾಸ್,ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಧ್ಯಾಪಕ ಅಲ್ವಿನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.



ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಂಯೋಜಕ ಸುನಿಲ್ ಗೊನ್ಸಾಲ್ವಿಸ್ ರವರು ಎಲ್ಲರನ್ನು ಸ್ವಾಗತಿಸಿ, ಒಕ್ಕೂಟದ ಅಧ್ಯಕ್ಷೆ ಎಲಿಯಮ್ಮ ತೋಮಸ್ ಧನ್ಯವಾದವಿತ್ತರು. ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜಾ ಅವರು ಕಾರ್ಯಕ್ರಮ ನಿರೂಪಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಡಂತ್ಯಾರು ಪೇಟೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಮೈಕ್ ಉದ್ಘೋಷಣೆ ಮಾಡಿ, ಸಾರ್ವಜನಿಕರಿಗೆ ಕ್ಯಾನ್ಸರ್ ರೋಗದ ಬಗ್ಗೆ ಕರಪತ್ರ ಹಂಚಲಾಯಿತು.

ಆರ್ಥಿಕವಾಗಿ ಹಿಂದುಳಿದ ಕ್ಯಾನ್ಸರ್ ರೋಗ ಪೀಡಿತ ವ್ಯಕ್ತಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಾರ್ವಜನಿಕರಿಂದ ಹಾಗೂ ಅಂಗಡಿ ಮುಂಗಟ್ಟುಗಳ ವರ್ತಕರಿಂದ ಧನ ಸಹಾಯ ಸಂಗ್ರಹಣೆ ಮಾಡಲಾಯಿತು.
ಒಕ್ಕೂಟದ ಪದಾಧಿಕಾರಿಗಳು, ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು, ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಆಳ್ವಾಸ್ ಕಾಲೇಜಿನ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.









