ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ: 9 ಮಂದಿಗೆ ಗಾಯ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು

0

ಚಾರ್ಮಾಡಿ ಘಾಟ್‌ನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿಟಿ ವಾಹನ ಒಂಬತ್ತನೇ ತಿರುವು ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.ಅಪಘಾತದ ಪರಿಣಾಮವಾಗಿ ವಾಹನದಲ್ಲಿದ್ದ ಒಂಬತ್ತು ಮಂದಿಗೆ ಗಾಯಗಳಾಗಿದ್ದು, ಅವರಲ್ಲಿ ತರೀಕೆರೆ ನಿವಾಸಿ ಒಬ್ಬನ ಸ್ಥಿತಿ ಗಂಭೀರ ಗಾಯವಾಗಿದ್ದು ಆ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಘಾಟ್ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸ್ಥಳೀಯರು ತಕ್ಷಣ ನೆರವಿಗೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here