ಮೊಗ್ರು : ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

0

ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಮಾ 23 ರಂದು ನೆರವೇರಿತು.

ಉಧ್ಯಮಿ ಮತ್ತು ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿಸಿದರು. ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷ ಉದಯ ಭಟ್ ಕೊಳಬ್ಬೆ, ಅಧ್ಯಕ್ಷ ಅಶೋಕ ಗೌಡ ಬರುoಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಗಂಗಾಧರ ಪೂಜಾರಿ ದಂಬೆತ್ತಿಮಾರು, ಮಾಜಿ ಸದಸ್ಯ ಬಾಲಕೃಷ್ಣ ಗೌಡ ಮುಗೇರಡ್ಕ, ಟ್ರಸ್ಟ್ ನ ಪದಾಧಿಕಾರಿಗಳು, ಮಾತಾಜಿಯವರು, ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here