ಡಾ.ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಪದವಿ

0

ಬೆಳ್ತಂಗಡಿ: ಮಂಗಳೂರು ವಿಶ್ವ ವಿದ್ಯಾನಿಲಯದ 44ನೇ ಘಟಿಕೋತ್ಸವದ ಅಂಗವಾಗಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಅಪೂರ್ವ ಸೇವೆ ಸಲ್ಲಿಸಿದ ಡಾ. ರವೀಶ್ ಪಡುಮಲೆ ಅವರಿಗೆ ಪಿ.ಎಚ್.ಡಿ. ಪದವಿ ನೀಡಿ ಗೌರವಿಸಲು ನಿರ್ಧರಿಸಲಾಗಿದೆ.

ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಡುಮಲೆಯವರಾದ ಡಾ. ರವೀಶ್ ಅವರು ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾಗಿದ್ದು ದೈವ ಚಾಕಿರಿ ಮಾಡುವವರೂ ಆಗಿದ್ದಾರೆ. ಉತ್ತಮ ವಾಗ್ಮಿಯಾಗಿಯೂ ಇವರು ಗುರುತಿಸಿಕೊಂಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ, ಇತ್ತೀಚೆಗೆ ನಿಧನರಾದ ಯಕ್ಷಗಾನ ವಿದ್ವಾಂಸ ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೂ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ಕುಲಪತಿ ಪ್ರೊ. ಪಿ. ಎಲ್. ಧರ್ಮ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here