






ಬೆಳ್ತಂಗಡಿ: ರಾಜ್ಯ ಪೊಲೀಸ್ ಇಲಾಖೆಯಲ್ಲಿನ ಅತ್ಯುತ್ತಮ ಸೇವೆಯನ್ನು ಗುರುತಿಸಿ ನೀಡಲಾಗುವ ಪ್ರತಿಷ್ಠಿತ 2025 ನೇ ಸಾಲಿನ ‘ಮುಖ್ಯಮಂತ್ರಿಗಳ ಚಿನ್ನದ ಪದಕ’ಕ್ಕೆ ಬೆಳ್ತಂಗಡಿ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯ್ ಕುಮಾರ್ ಅವರು ಭಾಜನರಾಗಿದ್ದಾರೆ.
ಬೆಳ್ತಂಗಡಿಯ ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯ್ ಅವರು ತಮ್ಮ ಕರ್ತವ್ಯದ ಅವಧಿಯಲ್ಲಿ ತೋರಿದ ನಿಷ್ಠೆ ಮತ್ತು ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.


ಇವರು ವೇಣೂರು ಪೊಲೀಸ್ ಠಾಣೆಯಲ್ಲಿ ಹತ್ತು ವರ್ಷಗಳ ಕಾಲ ಪಿ.ಸಿ ಯಾಗಿ ಸೇವೆ ಸಲ್ಲಿಸಿ ಮೂರು ವರ್ಷಗಳ ಹಿಂದೆ ಹೆಚ್.ಸಿ ಆಗಿ ಬಡ್ತಿ ಪಡೆದು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕ ಕಚೇರಿಗೆ ವರ್ಗಾವಣೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.
ಜಾಲ್ಸೂರು ಸಮೀಪದ ಬೆಳ್ಳಿಪ್ಪಾಡಿ ಸೀತಾರಾಮ ರೈ ಅವರ ಪುತ್ರ, ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನ ಉಪನ್ಯಾಸಕಿಯಾಗಿರುವ ಪತ್ನಿ ಅನುಷಾ ಹಾಗೂ ಪುತ್ರ ಅಯ್ಯುಕ್ತ ಜೊತೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆ ಯರ್ಡೂರಿನಲ್ಲಿ ವಾಸವಾಗಿದ್ದಾರೆ..









