







ಧರ್ಮಸ್ಥಳ :ಧರ್ಮಸ್ಥಳ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ನಡೆಯಿತು.


ಸಮಾರಂಭದಲ್ಲಿ ಅತಿಥಿಗಳಾಗಿ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಮನೋವೈದ್ಯೆ ಡಾ. ಸ್ವಾತಿ ಆಗಮಿಸಿ ಕಾರ್ಯಕ್ರಮವನ್ನು ದೀಪ ಉದ್ಘಾಟಿಸುವುದರ ಮೂಲಕ ಚಾಲನೆ ನೀಡಿದರು. ಬಳಿಕ ಅವರು ಮಕ್ಕಳು ಬೇಸಿಗೆ ಶಿಬಿರದಲ್ಲಿ ತರಬೇತಿ ಪಡೆದು ತಮ್ಮ ಕೈಯಾರೆ ತಾವೇ ತಯಾರಿಸಿದ ವಿವಿಧ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟ ಮಳಿಗೆಯನ್ನು ಉದ್ಘಾಟನೆ ಮಾಡಿದರು. ಬಳಿಕ ವಿವಿಧ ಮಳಿಗೆಗಳಾದ ಆಹಾರ ಉತ್ಪನ್ನ ಮಳಿಗೆ, ಪರಿಸರ ಸ್ನೇಹಿ ಉತ್ಪನ್ನಗಳ ಮಳಿಗೆ, ಆಭರಣದ ಮಳಿಗೆ, ಕರಕುಶಲ ಮಳಿಗೆ, ಕಲಾತ್ಮಕ ವಸ್ತುಗಳ ಮಳಿಗೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕರ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಶೆರ್ಲಿ ನರ್ಸಿಂಗ್ ಸೂಪರ್ ಇಂಟೆಂಡೆಂಟ್ ಚಿದಾನಂದ ಪಿ., ಆರ್ ಓ ಎಸ್ ಡಿ ಎ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ಉಜಿರೆ ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ .ವಿ. ಉಪಸ್ಥಿತರಿದ್ದರು. ಶಿಕ್ಷಕಿ ಆಶಾ.ಕುಮಾರಿ ಪಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಾ ವಿದ್ಯಾರ್ಥಿಗಳು ಹಾಗೂ ಶಾಲಾ ಶಿಕ್ಷಕ ವೃಂದ ಈ ಕಾರ್ಯಕ್ರಮಕ್ಕೆ ಸಾಕ್ಷಿಗಳಾದರು.









