ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ವೀಕ್ಷಾ ವಿ ಸಾಧನೆ

0

ಸಹ್ಯಾದ್ರಿ ಇಂಜಿನಿಯರಿಂಗ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ವಿದ್ಯಾರ್ಥಿನಿ ವೀಕ್ಷಾ ವಿ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ತನ್ನ ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಟಿಪ್ಟೂರಿನ ಕಲ್ಪತರು ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ನಡೆದ ಸ್ಪರ್ಧೆಯಲ್ಲಿ ಅವರು 21 ಕಿಮೀ ಹಾಫ್ ಮ್ಯಾರಥಾನ್‌ನಲ್ಲಿ ಬೆಳ್ಳಿ ಪದಕ ಮತ್ತು 10 ಕಿಮೀ ಓಟದಲ್ಲಿ ಚಿನ್ನದ ಪದಕ ಗಳಿಸಿದ್ದಾರೆ. ಇದು ಅವರ ಪರಿಶ್ರಮ ಮತ್ತು ಸಮರ್ಪಣೆಯ ಪ್ರತಿಬಿಂಬವಾಗಿದೆ.

ವೀಕ್ಷಾ ಅವರು ಮಂಜುಳಾ ಮತ್ತು ವಿಜಯಗೌಡ ಅವರ ಪುತ್ರಿ. ವಿಜಯಗೌಡ ಅವರು ಟೌನ್ ಪೊಲೀಸ್ ಸ್ಟೇಷನ್‌ನಲ್ಲಿ ಎಎಸ್ಐ (ASI) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here