







ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಗ್ರಾಮದ ಓಡಿಲ್ನಾಳ ಮತ್ತು ಮದ್ದಡ್ಕ ಪರಿಸರದಲ್ಲಿ ನಡೆಯುತ್ತಿರುವ ಗಾಂಜಾ ಮಾರಾಟ ಹಾಗೂ ಮಾದಕ ವಸ್ತುಗಳ ಸೇವನೆಯಂತಹ ಅನೈತಿಕ ಚಟುವಟಿಕೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವತಿಯಿಂದ ಸಾರ್ವಜನಿಕ ಜಾಗೃತಿ ಸಭೆ ನಡೆಸಲಾಯಿತು.


ಬೆಳ್ತಂಗಡಿ ಪೊಲೀಸ್ ಠಾಣೆಯ ಬೀಟ್ ಪೊಲೀಸ್ ಅಧಿಕಾರಿ ಶ್ರೀನಿವಾಸ್ ಬಿ.ಕೆ. ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಮದ್ದಡ್ಕ ಪರಿಸರದಲ್ಲಿ ನಡೆಯುವ ಮಾದಕ ವ್ಯಸನದಂತಹ ಅಕ್ರಮಗಳನ್ನು ನಿಯಂತ್ರಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ. ಇಂತಹ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ತಕ್ಷಣ ಇಲಾಖೆಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಭಾಗವಹಿಸಿದ ಸ್ಥಳೀಯರು ರಾತ್ರಿ ವೇಳೆಯಲ್ಲಿ ಕೆಲವು ಒಳ ರಸ್ತೆಗಳಲ್ಲಿ ಬೈಕ್ ಹಾಗೂ ಇತರ ವಾಹನಗಳನ್ನು ಬೇಕಾಬಿಟ್ಟಿ ನಿಲ್ಲಿಸಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುತ್ತಿರುವ ಬಗ್ಗೆ ಗಮನ ಸೆಳೆದರು. ಅಲ್ಲದೆ, ಗಾಂಜಾ ಮಾರಾಟದ ಬಗ್ಗೆ ಮಾಹಿತಿ ಸಿಕ್ಕ ತಕ್ಷಣ ಅಂತಹ ವ್ಯಕ್ತಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.









