







ಬಂದಾರು: ಇಲ್ಲಿನ ಕುರಾಯ ಶ್ರೀ ಸದಾಶಿವ ದೇವಸ್ಥಾನದಲ್ಲಿ ಏಪ್ರಿಲ್ 2 ರಿಂದ 10 ರವರೆಗೆ ನಡೆಯಲಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವದ ಹಿನ್ನೆಲೆಯಲ್ಲಿ, ಏಪ್ರಿಲ್ 1 ರಂದು ದೇವಸ್ಥಾನದ ಆವರಣದಲ್ಲಿ ಭಕ್ತಾದಿಗಳಿಂದ ಭರ್ಜರಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.


ಜಾತ್ರೋತ್ಸವದ ಯಶಸ್ಸಿಗಾಗಿ ದೇವಸ್ಥಾನದ ಒಳಾಂಗಣ ಮತ್ತು ಹೊರಾಂಗಣವನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲಾಗಿದ್ದು, ದೇವಸ್ಥಾನವನ್ನು ತಳಿರು ತೋರಣಗಳಿಂದ ಮದುವಣಗಿತ್ತಿಯಂತೆ ಅಲಂಕರಿಸಲಾಗಿದೆ.
ಜಾತ್ರೋತ್ಸವ ಸಮಿತಿಯ ಅಧ್ಯಕ್ಷ ಜನಾರ್ಧನ ಗೌಡ ನಿರುಂಬುಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಚಂದ್ರಕಲಾ, ದೇವಳದ ಅರ್ಚಕರು ಸೇರಿದಂತೆ ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಪ್ರಗತಿ ಬಂಧು ಒಕ್ಕೂಟದ ಪದಾಧಿಕಾರಿಗಳು ಮತ್ತು ನೂರಾರು ಭಕ್ತರು ಶ್ರಮದಾನದಲ್ಲಿ ಪಾಲ್ಗೊಂಡಿದ್ದರು.









