ಕನ್ಯಾಡಿ ಸೇವಾಭಾರತಿಯಿಂದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರ ಭೇಟಿ

0

ಮಂಗಳೂರು (ಏ. 01): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ(CEO) ವಿನಾಯಕ್ ನರ್ವಡೆ ಅವರನ್ನು ಸೇವಾಭಾರತಿ ತಂಡ ಏಪ್ರಿಲ್ 01 ರಂದು ಭೇಟಿ ನೀಡಿ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು.

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

ಸೇವಾಭಾರತಿ ಅಧ್ಯಕ್ಷ ಹಾಗೂ ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್, ಸೇವಾಭಾರತಿಯ ಖಜಾಂಚಿ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕ ಚರಣ್ ಕುಮಾರ್ ಎಂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here