








ಬೆಳ್ತಂಗಡಿ: ಕೊಕ್ಕಡ ನಿವಾಸಿ ಅಕ್ಷಯ್ (31) ಎಂಬವರು ನೀಡಿದ ದೂರಿನಂತೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಅಕ್ಷಯ್ ಅವರು ಮಾ. 29ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಕೊಕ್ಕಡ ಎಂಬಲ್ಲಿಯ ಬಾರ್ ಮತ್ತು ರೆಸ್ಟೋರೆಂಟ್ ನಲ್ಲಿ ಮದ್ಯ ಸೇವಿಸಲು ಕುಳಿತಿರುವಾಗ ಅಲ್ಲಿಗೆ ಬಂದ ಯತೀಶ್ ಎಂಬವರು ಹಣಕಾಸಿನ ವಿಚಾರದಲ್ಲಿ ತಕರಾರು ತೆಗೆದು ಅವಾಚ್ಯ ಶಬ್ದದಿಂದ ಬೈದು ಹಲ್ಲೆ ನಡೆಸಿದ್ದಾರೆ. ಯತೀಶ, ಧನುಷ್ ಭಂಡಾರಿ, ಶರತ್ ಭಂಡಾರಿ ಮತ್ತು ಪ್ರವೀಣ್ ಕೂಡ ಅಕ್ಷಯ್ ಅವರಿಗೆ ಹಲ್ಲೆ ನಡೆಸಿ ಅವಾಚ್ಯ ಶಬ್ದದಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ. 23/2026ರಂತೆ ಕಲಂ: 352,115(2), 118(1), 351(2) R/W 3(5)ಬಿಎನ್ಎಸ್-2023ಯಂತೆ ಪ್ರಕರಣ ದಾಖಲಾಗಿದೆ.









