ಪುದುವೆಟ್ಟು: ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮ ಎ.1ರಂದು ಹಮ್ಮಿಕೊಳ್ಳಲಾಯಿತು. ಈ ವರ್ಷದ ಬೇಸಿಗೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಗಣಪತಿ ದೇವಸ್ಥಾನದ ಪರೂಪತ್ಯಗಾರರಾದ ಅನಂತ ರಾವ್ ನುರಿತ್ತಾಯ ಅವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಬೇಸಿಗೆ ಶಿಬಿರದ ಉದ್ಘಾಟನೆಯನ್ನು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ವಹಿಸಿಕೊಂಡಿದ್ದರು. ಮೊದಲ ದಿನದ ಸಂಪನ್ಮೂಲ ವ್ಯಕ್ತಿಯಾದ ಪೂರ್ಣಿಮಾ ಸಂಜೀವ, ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅನಂತರಾಮ್ ನುರಿತ್ತಾಯರವರು ಬೇಸಿಗೆ ಶಿಬಿರದ ಮಹತ್ವ ಮತ್ತು ತಮ್ಮ ಶಾಲಾ ದಿನದ ನೆನಪುಗಳನ್ನು ಹಂಚಿಕೊಂಡು, ಇಂತಹ ಬೇಸಿಗೆ ಶಿಬಿರದಲ್ಲಿ ಶಾಲೆಯ ಎಲ್ಲ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಂಡು ಬೇಸಿಗೆ ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶೀನಪ್ಪಗೌಡರವರು ಆಡಳಿತ ಮಂಡಳಿಯಿಂದ ಈ ಒಂದು ಬೇಸಿಗೆ ಶಿಬಿರಗಳು ಬಹಳ ಯಶಸ್ವಿಯಾಗಿ ನಡೆದುಕೊಂಡು ಬರುತ್ತಿವೆ. ವಿದ್ಯಾರ್ಥಿಗಳು ಬೇಸಿಗೆ ಶಿಬಿರದಲ್ಲಿ ಕಲಿತಂತಹ ಎಲ್ಲ ವಿಚಾರಗಳನ್ನು ಮುಂಬರುವ ದಿನಗಳಲ್ಲಿ ಅದರ ಉಪಯೋಗವನ್ನು ತಾವುಗಳು ಪಡೆದುಕೊಳ್ಳಬೇಕಾಗಿ ತಿಳಿಸಿದರು.

ವಿದ್ಯಾರ್ಥಿಗಳ ಪ್ರಾರ್ಥನೆ ಗೀತೆಯೊಂದಿಗೆ ಪ್ರಾರಂಭಗೊಂಡ ಬೇಸಿಗೆ ಶಿಬಿರದ ಮೊದಲ ದಿನದ ಕಾರ್ಯಗಾರದಲ್ಲಿ ಪೂರ್ಣಿಮಾ ಸಂಜೀವ ಅವರು ವಿದ್ಯಾರ್ಥಿಗಳಿಗೆ ಕರುಕುಶಲ ವಸ್ತುಗಳ ತಯಾರಿ ಇದರ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.

ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರನ್ನು ಶಾಲಾ ಶಿಕ್ಷಕ ನಿಶಾಂತ್ ರವರು ಸ್ವಾಗತಿಸಿ, ಕಾರ್ಯಕ್ರಮವನ್ನು ಪುಷ್ಪಲತಾ ರವರು ನಿರೂಪಿಸಿದರು. ಶಾಲೆಯ ಎಲ್ಲ ಶಿಕ್ಷಕ ಬಂಧುಗಳು ಕಾರ್ಯಕ್ರಮಕ್ಕೆ ಸಹಕರಿಸಿದರು. ಶೀಲಾ ಎನ್. ರವರು ಧನ್ಯವಾದಗೈದರು.

LEAVE A REPLY

Please enter your comment!
Please enter your name here