ಪುದುವೆಟ್ಟು ಎಸ್‌ಡಿಎಂ ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

0

ಬೆಳ್ತಂಗಡಿ: ತಾಲೂಕಿನ ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳ ಬೇಸಿಗೆ ಶಿಬಿರವು ಏಪ್ರಿಲ್ 4, ಶನಿವಾರದಂದು ಸಮಾರೋಪಗೊಂಡಿತು.

ಶಾಲಾ ಮುಖ್ಯ ಶಿಕ್ಷಕರಾದ ಶೀನಪ್ಪ ಗೌಡ ಅವರು ಅಧ್ಯಕ್ಷತೆ ವಹಿಸಿ, ಶಿಬಿರದಲ್ಲಿ ವಿದ್ಯಾರ್ಥಿಗಳು ತೋರಿದ ಸಕ್ರಿಯ ಭಾಗವಹಿಸುವಿಕೆಯನ್ನು ಶ್ಲಾಘಿಸಿದರು.

ಶಾಲಾ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶಶಿಧರ್ ಜಿ. ಗುಂಪಕಲ್ಲು ಅವರು ಮಾತನಾಡಿ, ಇಂತಹ ಶಿಬಿರಗಳು ಗ್ರಾಮೀಣ ಭಾಗದ ಮಕ್ಕಳ ಸುಪ್ತ ಪ್ರತಿಭೆ ಹೊರಹಾಕಲು ಉತ್ತಮ ವೇದಿಕೆ ಎಂದರು.

ಶಿಬಿರದ ಅಂಗವಾಗಿ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಯ ಚಿತ್ರಕಲಾ ಶಿಕ್ಷಕ ಜಯರಾಮ್ ಪಿ.ಎಸ್. ಅವರು ವಿದ್ಯಾರ್ಥಿಗಳಿಗೆ ಚಿತ್ರಕಲೆಯ ಬಗ್ಗೆ ವಿಶೇಷ ಮಾಹಿತಿ ಮತ್ತು ತರಬೇತಿ ನೀಡಿದರು.

ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ತೇಜಾವತಿ ಉಪಸ್ಥಿತರಿದ್ದರು. ಶಿಕ್ಷಕ ಗೌರೀಶ್ ಎಂ. ಸ್ವಾಗತಿಸಿ, ಪವನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಶಾಲೆಯ ಸಮಸ್ತ ಶಿಕ್ಷಕ ವೃಂದದ ಸಹಕಾರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

LEAVE A REPLY

Please enter your comment!
Please enter your name here