







ಬೆಳ್ತಂಗಡಿ: ಸಂಕಷ್ಟದಲ್ಲಿರುವ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಕೆ.ಎಂ. ನಾಗೇಶ್ ಗೌಡ ಅವರು ಮಾನವೀಯತೆ ಮೆರೆದಿದ್ದಾರೆ.



ಇತ್ತೀಚೆಗೆ ನಿಡಿಗಲ್‌ನಲ್ಲಿ ಲೈಟಿಂಗ್ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬದಿಂದ ಆಕಸ್ಮಿಕವಾಗಿ ಬಿದ್ದು ಕಾಲು ಗಾಯಗೊಂಡಿರುವ ವರುಣ್ ಗುರಿಪಳ್ಳ ಅವರಿಗೆ ನಾಗೇಶ್ ಗೌಡ ಅವರು ನೆರವು ನೀಡಿದರು. ಸದ್ಯ ಪುತ್ತೂರಿನ ಪ್ರಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವರುಣ್ ಅವರನ್ನು ಭೇಟಿ ಮಾಡಿ, ಅವರ ಆರೋಗ್ಯ ವಿಚಾರಿಸಿದ ಅಧ್ಯಕ್ಷರು ಚಿಕಿತ್ಸಾ ವೆಚ್ಚಕ್ಕಾಗಿ ಧನಸಹಾಯ ಹಸ್ತಾಂತರಿಸಿದರು.
ಅದೇ ರೀತಿ, ಅನಾರೋಗ್ಯದಿಂದ ಬಳಲುತ್ತಿರುವ ಶಿಶಿಲದ ಹಿರಿಯ ಕಾಂಗ್ರೆಸ್ ಕಾರ್ಯಕರ್ತ ನಾನ್ಯಪ್ಪ ಗೌಡ ಅವರ ಮನೆಗೆ ಭೇಟಿ ನೀಡಿದ ನಾಗೇಶ್ ಗೌಡರು, ಅವರ ಕುಶಲೋಪರಿ ವಿಚಾರಿಸಿ ಧೈರ್ಯ ತುಂಬಿದರಲ್ಲದೆ, ಔಷಧೋಪಚಾರಕ್ಕಾಗಿ ಆರ್ಥಿಕ ಸಹಾಯ ನೀಡಿದರು.









