







ಬೆಳ್ತಂಗಡಿ: ಇಲ್ಲಿನ ನೇತ್ರಾವತಿ ನದಿ ತೀರದ ಸಮೀಪ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಏಪ್ರಿಲ್ 6 ರಂದು ನಡೆದಿದೆ.ಸುಮಾರು ದಿನಗಳ ಹಿಂದೆಯೇ ಈ ಸಾವು ಸಂಭವಿಸಿರುವ ಶಂಕೆ ವ್ಯಕ್ತವಾಗಿದ್ದು, ಮೃತದೇಹವು ಸಂಪೂರ್ಣವಾಗಿ ಕೊಳೆತ ಸ್ಥಿತಿಯಲ್ಲಿದೆ.


ಸ್ಥಳೀಯರು ಮೃತದೇಹವನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.ಮೃತ ವ್ಯಕ್ತಿಯ ಗುರುತು ಇನ್ನು ಪತ್ತೆಯಾಗಿಲ್ಲ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.









