ಬಳಂಜ ಶಾಲೆಗೆ ಕೈಗಾರಿಕೋದ್ಯಮಿ ಕೃಷ್ಣ ಸಂಪಿಗೆತ್ತಾಯ ಭೇಟಿ

0

ಬಳಂಜ: ಬೆಂಗಳೂರಿನ ಖ್ಯಾತ ಕೈಗಾರಿಕೋದ್ಯಮಿ ಹಾಗೂ ತೆಂಕ ಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಕೃಷ್ಣ ಸಂಪಿಗೆತ್ತಾಯ ಅವರು ಏ.6 ರಂದು ಬಳಂಜದ ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿ, ಶಾಲೆಯ ಪ್ರಗತಿಯನ್ನು ಶ್ಲಾಘಿಸಿದರು.

ಸಾಮಾಜಿಕ ಬದ್ಧತೆಯಿಂದ ಅನೇಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಸಂಪಿಗೆತ್ತಾಯ ಅವರು, ಇತ್ತೀಚೆಗೆ ಅಮೃತ ಮಹೋತ್ಸವ ಆಚರಿಸಿಕೊಂಡ ಶಾಲೆಯಲ್ಲಿ ಆದ ಬದಲಾವಣೆಗಳನ್ನು ಕಂಡು ಸಂತಸ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಯನ್ನು ಒಂದು ಮಾದರಿ ಶಾಲೆಯನ್ನಾಗಿ ರೂಪಿಸುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ‘ಬಳಂಜ ಶಿಕ್ಷಣ ಟ್ರಸ್ಟ್’ ಮತ್ತು ಹಳೆಯ ವಿದ್ಯಾರ್ಥಿಗಳ ಕಾರ್ಯವೈಖರಿಯನ್ನು ಅವರು ಮುಕ್ತಕಂಠದಿಂದ ಪ್ರಶಂಸಿಸಿದರು.

ಅಶ್ವಥ್ ಹೆಗ್ಡೆ ಫೌಂಡೇಶನ್ ಮೂಲಕ ಶಾಲೆಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ ಅವರು, ಶಾಲೆಯ ಮುಂದಿನ ಯೋಜನೆಗಳಿಗೆ ತಮ್ಮ ಸಂಪೂರ್ಣ ಸಹಕಾರ ಮತ್ತು ಮಾರ್ಗದರ್ಶನ ನೀಡುವುದಾಗಿ ಈ ಸಂದರ್ಭದಲ್ಲಿ ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಬಳಂಜ ಶಿಕ್ಷಣ ಟ್ರಸ್ಟಿನ ಅಧ್ಯಕ್ಷ ಮನು ಬಳಂಜ, ಅಮೃತ ಮಹೋತ್ಸವ ಸಮಿತಿಯ ಅಧ್ಯಕ್ಷ ಚಂದ್ರಶೇಖರ್ ಪಿ.ಕೆ., ಸಂತೋಷ್ ಸಾಲಿಯಾನ್, ದಿನೇಶ್ ಪಿ.ಕೆ. ಹಾಗೂ ಶಾಲಾ ಶಿಕ್ಷಕರು ಮತ್ತು ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಶಾಲೆಯ ಪರವಾಗಿ ಶ್ರೀ ಕೃಷ್ಣ ಸಂಪಿಗೆತ್ತಾಯ ಅವರನ್ನು ಆತ್ಮೀಯವಾಗಿ ಗೌರವಿಸಲಾಯಿತು.

LEAVE A REPLY

Please enter your comment!
Please enter your name here