ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಹಾಗೂ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

0

ಬೆಳ್ತಂಗಡಿ: ವಿಶ್ವ ಆರೋಗ್ಯ ದಿನದ ಅಂಗವಾಗಿ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಯುವ ರೆಡ್ ಕ್ರಾಸ್, ರಾಷ್ಟ್ರೀಯ ಸೇವಾ ಯೋಜನೆ (NSS) ಹಾಗೂ ರೋವರ್ಸ್-ರೇಂಜರ್ಸ್ ಘಟಕಗಳ ಸಂಯುಕ್ತಾಶ್ರಯದಲ್ಲಿ ಕಾಲೇಜು ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಆನ್‌ಲೈನ್ ಮೂಲಕ ‘ಮಾನಸಿಕ ಆರೋಗ್ಯ ಜಾಗೃತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ಪ್ರಖ್ಯಾತ ಮಾನಸಿಕ ತಜ್ಞರಾದ ಡಾ. ಸಿ.ಆರ್.ಚಂದ್ರಶೇಖರ್ ರವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಅಧ್ಯಾಪಕಿಗೆ ಮತ್ತು ಯುವಜನರಿಗೆ ಮಾನಸಿಕ ಆರೋಗ್ಯದ ಬಗ್ಗೆ ಅದರಲ್ಲೂ ವಿದ್ಯಾರ್ಥಿಗಳು ಪ್ರಸಕ್ತ ಪರಿಸ್ಥಿತಿಯಲ್ಲಿ ಎದುರಿಸುತ್ತಿರುವ ಮಾನಸಿಕ ಸಮಸ್ಯೆಗಳ ಬಗ್ಗೆ ಸವಿವರವಾಗಿ ತಿಳಿಸಿದರು. ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಒಳಗಾಗುತ್ತಿರುವುದು ಅತ್ಯಂತ ನೋವಿನ ಸಂಗತಿ ಆಗಿದೆ. ಹಾಗಾಗಿ ಅಧ್ಯಾಪಕರು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಮಾಡಬೇಕು ಅವರೊಂದಿಗೆ ಆತ್ಮಿಯವಾಗಿ ಮಾತಾನಾಡಿಸುವ ಮೂಲಕ ಖಿನ್ನತೆಯಿಂದ ಬಳಲುತ್ತಿರು ವಿದ್ಯಾರ್ಥಿಗಳನ್ನು ಅದರಿಂದ ಹೊರಗೆ ತರಬೇಕು ಎಂದು ತಿಳಿಸಿದರು.

ಸಮಾಜದಲ್ಲಿ ಪ್ರಸ್ತುತ ವಿದ್ಯಾಮಾನದಲ್ಲಿ ನಡೆಯುತ್ತಿರುವ ಜಾತಿ ವ್ಯವಸ್ಥೆ, ಭಷ್ಟಾಚಾರ, ಮೇಲು ಕೀಳು, ವ್ಯವಸ್ಥೆಗಳು ವಿದ್ಯಾರ್ಥಿಗಳಲ್ಲಿ ಖಿನ್ನತೆಯನ್ನು ಉಂಟುಮಾಡುತ್ತಿದೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಸುರೇಶ್ ವಿ., ರಾಷ್ಟ್ರೀಯ ಸೇವಾ ಯೋಜನಾ ಅಧಿಕಾರಿಗಳಾದ ಪ್ರೊ. ರೊನಾಲ್ಡ್ ಪ್ರವೀಣ್ ಕೊರಾಯ, ಯುವ ರೆಡ್ ಕ್ರಾಸ್ ಅಧಿಕಾರಿ ಹಾಗೂ ರೊವರ್ ಸ್ಕೌಟ್ ಲೀಡರ್ ಡಾ.ರವಿ ಎಂ.ಎನ್., ಕಾರ್ಯಕ್ರಮ ಸಂಯೋಜಕಾರದ ಡಾ. ದಿವ್ಯಪ್ರಭು ಮತ್ತು ಕಾಲೇಜಿನ ಎಲ್ಲಾ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದರ.

LEAVE A REPLY

Please enter your comment!
Please enter your name here