ಬಂದಾರು: ಕುರಾಯ ಶ್ರೀ ಸದಾಶಿವ ದೇವಸ್ಥಾನದ ಜಾತ್ರೋತ್ಸವಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

0

ಬಂದಾರು: ಇಲ್ಲಿನ ಬಂದಾರು ಗ್ರಾಮದ ಎ 08ರ ಶ್ರೀ ಕ್ಷೇತ್ರ ಕುರಾಯ ಸದಾಶಿವ ದೇವಸ್ಥಾನದಲ್ಲಿ ನಡೆಯುತ್ತಿರುವ ಪ್ರತಿಷ್ಠಾ ಮಹೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ದೇವಸ್ಥಾನದಲ್ಲಿ ಏಪ್ರಿಲ್ 02 ರಿಂದ 10 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಭೇಟಿ ನೀಡಿದ ಶಾಸಕರು ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ಅಭಿವೃದ್ಧಿ ಹಾಗೂ ಕಾರ್ಯಕ್ರಮದ ಯಶಸ್ಸಿಗೆ ಅವರು ಶುಭ ಹಾರೈಸಿದರು.

ದೇವಸ್ಥಾನದ ಆಡಳಿತಾಧಿಕಾರಿಗಳು, ಜಾತ್ರೋತ್ಸವ ಸಮಿತಿ, ಅಭಿವೃದ್ಧಿ ಸಮಿತಿ ಹಾಗೂ ಯಕ್ಷಗಾನ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು. ಅಲ್ಲದೆ ದೇವಸ್ಥಾನದ ಅರ್ಚಕರು, ಸ್ಥಳೀಯ ಪ್ರಮುಖರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here