






ಉಜಿರೆ: ಉಜಿರೆ ಗ್ರಾಮ ಪಂಚಾಯತಿನ ಮುಂದೂಡಲಾಗಿದ್ದ 2025-26ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಎ. 9ರಂದು ಗ್ರಾಮ ಪಂಚಾಯತ್ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಮಹಾವೀರ ಶೇಬಣ್ಣವರ ಅಧ್ಯಕ್ಷತೆಯಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಎಂ.ಎಸ್ ರವರು ಗ್ರಾಮ ಸಭೆಯನ್ನು ಮುನ್ನಡೆಸಿದರು.ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ಸ್ವಾಗತಿಸಿದರು. ಕಾರ್ಯದರ್ಶಿ ಶ್ರವಣ್ ಕುಮಾರ್ ಅನುಪಾಲನಾ ವರದಿ ವಾಚಿಸಿ, ನೂತನ ಕಟ್ಟಡ, ವಾಣಿಜ್ಯ, ಭೂ ತೆರಿಗೆ ವಿವರ ನೀಡಿದರು.


ಲೆಕ್ಕ ಸಹಾಯಕಿ ಮಮತಾ ಆಯ ವ್ಯಯ ಮಂಡಿಸಿದರು. ಸಿಬ್ಬಂದಿ ಉಮೇಶ್ ವಸತಿ ರಹಿತರ ವಿವರ ನೀಡಿದರು. ಸಿಬ್ಬಂದಿ ರಮೇಶ್ ನಾಯ್ಕ ವಾರ್ಡ್ ಸಭೆಯಲ್ಲಿ ಬಂದ ಬೇಡಿಕೆಯ ವಿವರ ನೀಡಿದರು.ಮೋಹನ್ ಹೆಚ್. ಬಿ. ಕುಡಿಯುವ ನೀರಿನ ಸರಬರಾಜು ಬಗ್ಗೆ ವಿವರ ನೀಡಿದರು.ವಿವಿಧ ಇಲಾಖೆಯ ಅಧಿಕಾರಿಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ನಿಕಟ ಪೂರ್ವ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಮಾಜಿ ಅಧ್ಯಕ್ಷರುಗಳಾದ ಶ್ರೀಧರ ಪೂಜಾರಿ, ಶ್ರೀನಿವಾಸ, ಮಾಜಿ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಸದಸ್ಯರು,ಗ್ರಾಮಸ್ಥರು ಉಪಸ್ಥಿತರಿದ್ದರು. ಸಿಬ್ಬಂದಿ ವರ್ಗದವರು ಸಹಕರಿಸಿದರು.









