







ಬೆಳ್ತಂಗಡಿ: ತಾಲೂಕಿನ ಬಂದಾರು ಗ್ರಾಮದ ಬೆಳ್ತಿಗೇರು ಎಂಬಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಕಳೆದ ರಾತ್ರಿ ರೈತರೊಬ್ಬರ ತೋಟಕ್ಕೆ ಲಗ್ಗೆ ಇಟ್ಟ ಆನೆಯು ಭಾರೀ ಪ್ರಮಾಣದ ಹಾನಿ ಮಾಡಿದೆ.


ಬಂದಾರು ಗ್ರಾಮದ ನಿವಾಸಿ ಚಂದ್ರಶೇಖರ್ ನಾಯಕ್ ಅವರ ತೋಟಕ್ಕೆ ನುಗ್ಗಿದ ಕಾಡಾನೆ, ಕೃಷಿಗೆ ನೀರುಣಿಸಲು ಅಳವಡಿಸಲಾಗಿದ್ದ ಪಂಪ್ಸೆಟ್ ಅನ್ನು ಸಂಪೂರ್ಣವಾಗಿ ತುಳಿದು ಮುರಿದು ಹಾಕಿದೆ. ಇದರಿಂದಾಗಿ ರೈತರಿಗೆ ಆರ್ಥಿಕ ನಷ್ಟ ಸಂಭವಿಸಿದೆ.
ಕೂಡಲೇ ಅರಣ್ಯ ಇಲಾಖೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಹಾಗೂ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.ವರದಿ: ಮುಹಮ್ಮದ್ ಬಂದಾರು, ಬಟ್ಲಡ್ಕ









