ಕರಂಬಾರು ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಜಯಂತಿ ಆಚರಣೆ

0

ಕರಂಬಾರು: ಇಲ್ಲಿನ ಸರಕಾರಿ ಶಾಲೆಯಲ್ಲಿ ವಿಶ್ವ ಜ್ಞಾನಿ, ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸಲಾಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಲಾಭಿವೃದ್ಧಿ ಸಮಿತಿ (SDMC) ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಅವರು ದೀಪ ಬೆಳಗಿಸಿ ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, “ಪ್ರತಿಯೊಬ್ಬ ವಿದ್ಯಾರ್ಥಿಯೂ ಡಾ. ಬಿ. ಆರ್. ಅಂಬೇಡ್ಕರ್ ಅವರ ಜೀವನದ ಆದರ್ಶಗಳು ಹಾಗೂ ನಡೆಯನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವರ ತತ್ವಗಳ ಮೂಲಕ ಸಮಾಜದಲ್ಲಿ ಸಮಾನತೆ ಮೂಡಿಸಿ, ಸಮ ಸಮಾಜ ನಿರ್ಮಾಣ ಮಾಡಲು ಮುಂದಾಗಬೇಕು” ಎಂದು ಕರೆ ನೀಡಿ, ನಾಡಿನ ಜನತೆಗೆ ಜಯಂತಿಯ ಶುಭಾಶಯಗಳನ್ನು ಕೋರಿದರು.

ಶಾಲೆಯ ಮುಖ್ಯ ಶಿಕ್ಷಕರಾದ ರಮೇಶ್ ಛಾವಣ್ ಅವರು ಮಾತನಾಡಿ, ಬಾಬಾಸಾಹೇಬರ ಕೊಡುಗೆಯನ್ನು ಸ್ಮರಿಸುತ್ತಾ ಎಲ್ಲರಿಗೂ ಶುಭಾಶಯಗಳನ್ನು ತಿಳಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಹಾಗೂ ಪೋಷಕರಿಗೆ ಸಿಹಿ ತಿಂಡಿಗಳನ್ನು ಹಂಚುವ ಮೂಲಕ ಸಂತೋಷವನ್ನು ಹಂಚಿಕೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಸದಸ್ಯೆ ಶರ್ಮಿಳ, ಶೋಭಾ ಹಾಗೂ ಶಿಕ್ಷಕಿಯರಾದ ಸಾವಿತ್ರಿ ಮತ್ತು ಸ್ವಾತಿ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ತಸ್ಮಿಯ ಅವರು ಕಾರ್ಯಕ್ರಮವನ್ನು ಸ್ವಾಗತಿಸಿ, ಅಚ್ಚುಕಟ್ಟಾಗಿ ನಿರೂಪಿಸಿದರು. ಶಿಕ್ಷಕಿ ಲತಾ ಎಂ. ಧನ್ಯವಾದ ಅರ್ಪಿಸಿದರು.

LEAVE A REPLY

Please enter your comment!
Please enter your name here