






ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿರುವ ಸಹನಾ ಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ನಿಯಮಿತ ಇದರ ವತಿಯಿಂದ ಶೀಘ್ರದಲ್ಲೇ ಹೊಸದಾಗಿ “ಸಹನಾ ಶ್ರೀ ಫೌಂಡೇಶನ್ (ರಿ)” ಪ್ರಾರಂಭವಾಗಲಿದೆ.


ಈ ಫೌಂಡೇಶನ್ ಮೂಲಕ ಸಮಾಜ ಸೇವೆ, ಕ್ರೀಡಾ ಚಟುವಟಿಕೆಗಳು ಹಾಗೂ ಸಾಂಸ್ಕೃತಿಕ ಹಬ್ಬ-ಹರಿದಿನಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಲಾಗುವುದು. ರಾಜ್ಯ ಮಟ್ಟ ಮತ್ತು ರಾಷ್ಟ್ರ ಮಟ್ಟದಲ್ಲಿ ಸಮಾಜಸೇವೆಯನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಸಮಾಜದ ಅಭಿವೃದ್ಧಿಗೆ ಬದ್ಧವಾಗಿದೆ.
ಈ ಮಹತ್ವದ ಕಾರ್ಯದಲ್ಲಿ ತಮ್ಮೆಲ್ಲರ ಸಹಕಾರ ಮತ್ತು ಬೆಂಬಲವನ್ನು ನೀಡುವಂತೆ ಈ ಮೂಲಕ ಸಹನಾ ಶ್ರೀ ಫೌಂಡೇಶನ್ ಅಧ್ಯಕ್ಷ ರಾಜೇಶ್ ಪುದುಶೇರಿ ವಿನಂತಿಸಿಕೊಂದಡಿದ್ದಾರೆ.









