ನಿಡ್ಲೆ: ನಿವೃತ್ತ ಗ್ರಾಮ ಪಂಚಾಯತ್ ಕಾರ್ಯದರ್ಶಿಗೆ ದಂಡ – ತ್ಯಾಜ್ಯ ಎಸೆದ ಪ್ರಕರಣಕ್ಕೆ ಕಟ್ಟುನಿಟ್ಟಿನ ಕ್ರಮ

0

ಬೆಳ್ತಂಗಡಿ: ಸಾರ್ವಜನಿಕ ಸ್ಥಳದಲ್ಲಿ ತ್ಯಾಜ್ಯ ಎಸೆದ ನಿವೃತ್ತ ಸರ್ಕಾರಿ ಅಧಿಕಾರಿಗೆ ನಿಡ್ಲೆ ಗ್ರಾಮ ಪಂಚಾಯತ್ ಕಟ್ಟುನಿಟ್ಟಿನ ಕ್ರಮ ಕೈಗೊಂಡು ದಂಡ ವಿಧಿಸಿರುವ ಘಟನೆ ನಿಡ್ಲೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ. ಏಪ್ರಿಲ್ 4ರಂದು ‘ಸ್ವಚ್ಛತಾ ಶನಿವಾರ’ ಕಾರ್ಯಕ್ರಮದ ಅಂಗವಾಗಿ ಕುದ್ರಾಯದಿಂದ ಬರೆಂಗಾಯವರೆಗೆ ರಸ್ತೆ ಬದಿ ಸ್ವಚ್ಛತಾ ಕಾರ್ಯ ನಡೆಯುತ್ತಿದ್ದ ವೇಳೆ, ಕೈರೋಳಿ ಪ್ರದೇಶದ ರಸ್ತೆಯ ಬದಿಯಲ್ಲಿ ತ್ಯಾಜ್ಯ ಎಸೆಯಲ್ಪಟ್ಟಿರುವುದು ಪತ್ತೆಯಾಯಿತು.

ಸ್ಥಳ ಪರಿಶೀಲನೆ ನಡೆಸಿದಾಗ ತ್ಯಾಜ್ಯದಲ್ಲಿ ಸಿಕ್ಕ ದಾಖಲೆಗಳ ಆಧಾರದಿಂದ, ನಿಡ್ಲೆ ಗ್ರಾಮದ ಕಲ್ಲಿಮಾರು ನಿವಾಸಿ ವೆಂಕಪ್ಪ ಗೌಡ ಅವರು ತಮ್ಮ ಮನೆಯಿಂದ ಹಳೆಯ ತ್ಯಾಜ್ಯ ವಸ್ತುಗಳನ್ನು ತಂದು ಎಸೆದಿರುವುದು ಬೆಳಕಿಗೆ ಬಂದಿದೆ.ವೆಂಕಪ್ಪ ಗೌಡ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿರುವುದು ಗಮನಾರ್ಹವಾಗಿದೆ.

ಸಾರ್ವಜನಿಕರಿಗೆ ಮಾದರಿಯಾಗಬೇಕಾದ ವ್ಯಕ್ತಿಯಿಂದಲೇ ಇಂತಹ ನಿಯಮ ಉಲ್ಲಂಘನೆ ನಡೆದಿರುವುದು ಸ್ಥಳೀಯರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.ಈ ಹಿನ್ನೆಲೆ, ನಿಡ್ಲೆ ಗ್ರಾಮ ಪಂಚಾಯತ್ ಅವರು 1,035 ರೂಪಾಯಿ ದಂಡ ವಿಧಿಸಿ ನೋಟಿಸ್ ಜಾರಿ ಮಾಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುವವರ ವಿರುದ್ಧ ಮುಂದೆಯೂ ಇದೇ ರೀತಿಯ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಪಂಚಾಯತ್ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here