ಬೆಳ್ತಂಗಡಿ ಸರ್ಕಾರಿ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿಯಲ್ಲಿ 96.07% ಫಲಿತಾಂಶ

0

ಬೆಳ್ತಂಗಡಿ: ಇತ್ತೀಚೆಗೆ ಪ್ರಕಟಗೊಂಡ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಇಲ್ಲಿನ ಸರ್ಕಾರಿ ಪ್ರೌಢಶಾಲೆಯು ಅತ್ಯುತ್ತಮ ಸಾಧನೆ ಮಾಡಿದೆ. ಒಟ್ಟು 96.07% ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 51 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.

ಉತ್ತೀರ್ಣರಾದ ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ (Distinction) ಪಡೆದರೆ, 31 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಉಳಿದಂತೆ 9 ವಿದ್ಯಾರ್ಥಿಗಳು ದ್ವಿತೀಯ ದರ್ಜೆ ಹಾಗೂ 3 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.

LEAVE A REPLY

Please enter your comment!
Please enter your name here