







ಮುಂಡಾಜೆ: ಇತ್ತೀಚೆಗೆ ಪ್ರಕಟಗೊಂಡ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಇಲ್ಲಿನ ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯು ಶೇ. 100ರಷ್ಟು ಸಾಧನೆ ಮಾಡಿದೆ. ಈ ಸಾಲಿನಲ್ಲಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 39 ವಿದ್ಯಾರ್ಥಿಗಳೂ ಉತ್ತೀರ್ಣರಾಗುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ.


ವಿದ್ಯಾರ್ಥಿ ಸಂಕೇತ್ 625ರಲ್ಲಿ 592 ಅಂಕಗಳನ್ನು ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಶಾಲೆಯ ಒಟ್ಟು ಫಲಿತಾಂಶದಲ್ಲಿ 13 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (Distinction), 22 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಒಬ್ಬ ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.









