







ನಾವೂರು : 2025-26ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ.97.61 ಫಲಿತಾಂಶ ಲಭಿಸಿದೆ.


ಪರೀಕ್ಷೆಗೆ ಹಾಜರಾದ 42 ವಿದ್ಯಾರ್ಥಿಗಳಲ್ಲಿ 41 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ತೃಪ್ತಿ ಟಿ. ಗೌಡ 594 ಅಂಕ ಪಡೆದು ಪ್ರಥಮ ಸ್ಥಾನ ಹಾಗೂ ಕೌಶಲ್ 582 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಹಿತೇಶ್ 567 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
11 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 18 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 9 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 3 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.









