ನಾರಾವಿ ಅನುದಾನಿತ ಪ್ರೌಢಶಾಲೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100% ಫಲಿತಾಂಶ

0

ನಾರಾವಿ: ಸಂತ ಅಂತೋನಿ ಶಿಕ್ಷಣ ಸಂಸ್ಥೆಗಳಲ್ಲೊಂದಾದ ನಾರಾವಿ ಅನುದಾನಿತ ಪ್ರೌಢಶಾಲೆಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100ರಷ್ಟು ಸಾಧನೆ ಮಾಡುವುದರ ಮೂಲಕ ಅಮೋಘ ಫಲಿತಾಂಶವನ್ನು ದಾಖಲಿಸಿದೆ.

ಈ ಬಾರಿ ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 53 ವಿದ್ಯಾರ್ಥಿಗಳೂ ಕೂಡ ಉತ್ತೀರ್ಣರಾಗಿದ್ದು, ಶಾಲೆಯ ಗೌರವವನ್ನು ಹೆಚ್ಚಿಸಿದ್ದಾರೆ. ಸಾಧಕ ವಿದ್ಯಾರ್ಥಿಗಳಲ್ಲಿ ಪ್ರಾರ್ಥವಿ ಜೈನ್ 587 ಅಂಕಗಳನ್ನು ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಉಳಿದಂತೆ ಸ್ನೇಹ 579 ಅಂಕ ಹಾಗೂ ಯತೀಶ್ 578 ಅಂಕಗಳನ್ನು ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಒಟ್ಟು ಫಲಿತಾಂಶದಲ್ಲಿ 11 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ (Distinction) ಉತ್ತೀರ್ಣರಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಮುಖ್ಯೋಪಾಧ್ಯಾಯ ಗೋಪಾಲಕೃಷ್ಣ ತುಳುಪುಳೆ ಹಾಗೂ ಶಿಕ್ಷಕ ವೃಂದದವರು ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here