ಉಜಿರೆ: ಭಾರತೀಯ ಜೈನ್ ಮಿಲನ್ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

0

ಬೆಳ್ತಂಗಡಿ: ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಘಟಕದ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಇತ್ತೀಚೆಗೆ ಉಜಿರೆಯಲ್ಲಿ ಜರುಗಿತು.

ಸಂಘಟನೆಯ ನೂತನ ಅಧ್ಯಕ್ಷರಾಗಿ ವೀರ್ ಡಾಕ್ಟರ್ ಸನ್ಮತಿ ಕುಮಾರ್ ಅವರು ಅಧಿಕಾರ ವಹಿಸಿಕೊಂಡರು. ನಿರ್ದೇಶಕರಾದ ಬಿ. ಸೋಮಶೇಖರ ಶೆಟ್ಟಿ ಅವರು ನೂತನ ತಂಡಕ್ಕೆ ಪ್ರಮಾಣ ವಚನ ಬೋಧಿಸಿ, ಮಿಲನ್ ಸಂಘಟನೆಯ ಅವಶ್ಯಕತೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷರು, “ಮುಂದಿನ ದಿನಗಳಲ್ಲಿ ಸರ್ವ ಸದಸ್ಯರ ಸಹಕಾರದೊಂದಿಗೆ ಅರ್ಥಪೂರ್ಣ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು” ಎಂದು ತಿಳಿಸಿದರು.

ರಾಷ್ಟ್ರೀಯ ವಾಲಿಬಾಲ್ ಆಟಗಾರ್ತಿ ಕುಮಾರಿ ಲಾಸ್ಯ ಹಾಗೂ ಸಾಧಕರಾದ ವೀರ್ ಬಿ. ಭುಜಬಲಿ ಅವರನ್ನು ವಿಶೇಷವಾಗಿ ಗೌರವಿಸಲಾಯಿತು. ಅಲ್ಲದೆ, ಬೆಳ್ತಂಗಡಿ ತಾಲೂಕಿನ ಹತ್ತನೇ ತರಗತಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಪ್ರತಿಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ವಲಯ ಉಪಾಧ್ಯಕ್ಷ ವೀರ್ ಬಿ. ಸುದರ್ಶನ್ ಜೈನ್ ಬಂಟ್ವಾಳ ಅವರು ಮಾತನಾಡಿ, ಮಿಲನ್ ಸಂಘಟನೆಯ ಕಾರ್ಯವೈಖರಿ ಹಾಗೂ ಶ್ರಾವಕರ ಜವಾಬ್ದಾರಿಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ನಿರ್ಗಮನ ಅಧ್ಯಕ್ಷ ಡಾ. ನವೀನ್ ಕುಮಾರ್ ಅವರು ಕಳೆದ ಮೂರು ವರ್ಷಗಳ ಸಾಧನೆಗಳನ್ನು ಮೆಲುಕು ಹಾಕಿದರು.ವೇದಿಕೆಯಲ್ಲಿ ಪ್ರಾಂಶುಪಾಲರಾದ ಬಿ. ಪ್ರಮೋದ್ ಕುಮಾರ್, ಪ್ರವೀಣ್ ಕುಮಾರ್ ಇಂದ್ರ, ಎಂ. ಸಂತೋಷ್ ಕುಮಾರ್ ಜೈನ್, ಡಾ. ರಜತ ಪಿ. ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಕೋಶಾಧಿಕಾರಿ ರವೀಶ್ ಕುಮಾರ್ ವಿದ್ಯಾರ್ಥಿಗಳನ್ನು ಪರಿಚಯಿಸಿದರು.

ಸಂಪತ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಕಾರ್ಯದರ್ಶಿ ಸುಮನ್ ಕುಮಾರ್ ಜೈನ್ ವಂದಿಸಿದರು. ಧರ್ಮಪಾಲ್ ಜೈನ್ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮ

LEAVE A REPLY

Please enter your comment!
Please enter your name here