







ಉಜಿರೆ :ಗುರುವಾಯನಕೆರೆ- ಕಾರ್ಕಳ ರಾಜ್ಯ ಹೆದ್ದಾರಿಯ ಅಳದಂಗಡಿಯ ಕೆದ್ದು ಸಮೀಪ ಕಾರ್ಕಳ ಕಡೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತೋಟಕ್ಕೆ ಉರುಳಿದ ಘಟನೆ ಮೇ.2 ರಾತ್ರಿ ನಡೆದಿದೆ.


ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸ್ಥಳವು ಅಪಘಾತ ವಲಯವಾಗಿದ್ದು, ಆಗಾಗ ಅಪಘಾತಗಳು ಉಂಟಾಗುತ್ತಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.









