ಉಜಿರೆ: ಇಚ್ಚಿಲ ಗ್ರಾಮ ಪಂಚಾಯತ್ ತ್ಯಾಜ್ಯ ಘಟಕಕ್ಕೆ ಆಕಸ್ಮಿಕ ಬೆಂಕಿ

0

ಉಜಿರೆ: ಇಚ್ಚಿಲದಲ್ಲಿರುವ ಗ್ರಾಮ ಪಂಚಾಯಿತಿಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮೇ. 04 ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂತ್ತು. ಅಗ್ನಿಶಾಮಕದಳದೊಂದಿಗೆ ಪಂಚಾಯಿತಿ ಸಿಬ್ಬಂದಿ ಹಾಗೂ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣೆ ತಂಡ ಮತ್ತು ಊರಿನವರು ಒಟ್ಟು ಸೇರಿ ಬೆಂಕಿ ಹತೋಟಿಗೆ ತರಲು ಸಹಕರಿಸಿದರು.

ಇದೀಗ ಮತ್ತೆ ರಾತ್ರಿ ಬೆಂಕಿ ಕಾಣಿಸಿಕೊಂಡಿದೆ, ಬೆಂಕಿ ನಂದಿಸಲು ಅಗ್ನಿಶಾಮಕದಳದೊಂದಿಗೆ ಊರಿನವರು ಸೇರಿ ಬೆಂಕಿ ನಂದಿಸುವಲ್ಲಿ ತೊಡಗಿಕೊಂಡಿದ್ದಾರೆ. ಪಂಚಾಯಿತಿ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಈ ಘಟನೆಗೆ ಪಂಚಾಯಿತಿ ನೇರ ಹೊನೆ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here