ಇಂದಬೆಟ್ಟು: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವಕ್ಕೆ ಚಾಲನೆ

0

ಇಂದಬೆಟ್ಟು: ಪುಣ್ಯಕ್ಷೇತ್ರವಾದ ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೋತ್ಸವ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ 5 ರಿಂದ ಪ್ರಾರಂಭಗೊಂಡಿದೆ.

ಮೇ 9ರ ವರೆಗೆ ನಡೆಯಲಿರುವ ಈ ಧಾರ್ಮಿಕ ಕಾರ್ಯಕ್ರಮಗಳು ನೀಲೇಶ್ವರ ಬ್ರಹ್ಮಶ್ರೀ ವೇ.ಮೂ. ಆಲಂಬಾಡಿ ಪದ್ಮನಾಭ ತಂತ್ರಿಗಳ ಘನ ಉಪಸ್ಥಿತಿಯಲ್ಲಿ ಹಾಗೂ ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್‌ಕೃಷ್ಣ ಪಡ್ಡೆಟ್ನಾಯ ಅವರ ಮಾರ್ಗದರ್ಶನದಲ್ಲಿ ನೆರವೇರಲಿವೆ.

ಉತ್ಸವದ ಮೊದಲ ದಿನವಾದ ಇಂದು (ಮೇ 5) ಸಂಜೆ ಭಕ್ತಾದಿಗಳಿಂದ ಭಕ್ತಿಪೂರ್ವಕ ‘ಹಸಿರುವಾಣಿ ಹೊರೆಕಾಣಿಕೆ’ ಸಮರ್ಪಣೆ ನಡೆಯಿತು. ಬಳಿಕ ತಂತ್ರಿಗಳ ಆಗಮನ, ಪ್ರಾರ್ಥನೆ, ತೋರಣ ಮುಹೂರ್ತದೊಂದಿಗೆ ವಿಧ್ಯುಕ್ತವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ರಾತ್ರಿ ನಡೆದ ದೀಪ ಪ್ರಜ್ವಲನಾ ಕಾರ್ಯಕ್ರಮವನ್ನು ಆರೋಗ್ಯ ಕ್ಲಿನಿಕ್‌ನ ಡಾ| ಪ್ರದೀಪ್ ಎ. ಅವರು ಉದ್ಘಾಟಿಸಿ ಚಾಲನೆ ನೀಡಿದರು.

ಧಾರ್ಮಿಕ ಕಾರ್ಯಕ್ರಮಗಳ ನಡುವೆ ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ಭಜನಾ ತಂಡದಿಂದ ಸುಮಧುರ ಭಜನಾ ಕಾರ್ಯಕ್ರಮ ಜರುಗಿತು. ನಂತರ ದೇವನಾರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರದರ್ಶನ ಗೊಂಡಿತು.

ಮಹಾಪೂಜೆಯ ನಂತರ ಭಕ್ತಾದಿಗಳಿಗೆ ಅನ್ನಸಂತರ್ಪಣೆ ಹಾಗೂ ಪ್ರಸಾದ ವಿತರಣೆ ಮಾಡಲಾಯಿತು.ಐದು ದಿನಗಳ ಕಾಲ ನಡೆಯಲಿರುವ ಈ ಮಹೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಸಮಿತಿ ವಿನಂತಿಸಿದೆ.

LEAVE A REPLY

Please enter your comment!
Please enter your name here