






ಶಿಬಾಜೆ ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಗ್ರಂಥಾಲಯ ಶಿಬಾಜೆ ಇದರ ವತಿಯಿಂದ ಓದುವ ಬೆಳಕು ಕಾರ್ಯಕ್ರಮ ದಡಿ”ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭವನ್ನು ಮೇ.5 ರಂದು ಪಂಚಾಯತ್ ಆಡಳಿತಾಧಿಕಾರಿ ಮತ್ತು ಅಭಿವೃದ್ಧಿ ಅಧಿಕಾರಿಯವರು ದೀಪ ಪ್ರಜ್ವಲನೆಯ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.


ಪಂಚಾಯತ್ ಆಡಳಿತಾಧಿಕಾರಿ ಶಿಬಿರದ ಮಹತ್ವವನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿ ಶಿಬಿರಾರ್ಥಿ ಪ್ರತೀಕ್ ಸ್ವಾಗತಿಸಿದರು. ಕೊನೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಧನ್ಯವಾದ ಅರ್ಪಿಸಿದರು.









